ಸಾವು ನಿಯಂತ್ರಣಕ್ಕೆ ಹಲವು ಸಮಸ್ಯೆ

ಆರೋಗ್ಯ ಸಿಬ್ಬಂದಿಗಳ ಕೊರತೆ, ಆಶಾ ಕಾರ್ಯಕರ್ತೆಯರ ಮುಷ್ಕರದಿಂದ ಸರ್ವೇಕ್ಷಣೆ ವಿಳಂಬ

ದಾವಣಗೆರೆ, ಜು.18- ಕಡೇ ಗಳಿಗೆಯಲ್ಲಿ ಆಸ್ಪತ್ರೆಗೆ ದಾಖಲಾದರೆ, ಇತರೆ ಕಾಯಿಲೆಯೊಂದಿಗೆ ಕೊರೊನಾ ಸೋಂಕು ಬಾಧಿತರಾದವರನ್ನು ಉಳಿಸುವುದು ಕಷ್ಟ ಎಂದು ತಜ್ಞ ವೈದ್ಯ ಡಾ.ಕಾಳಪ್ಪ ಕಳವಳ ವ್ಯಕ್ತಪಡಿಸಿದರು.

ಕೊರೊನಾ ಸೋಂಕಿಗೆ ಸಂಬಂಧಿಸಿದ ಸಾವುಗಳ ಪೈಕಿ ಎಸ್.ಎಸ್. ಹೈಟೆಕ್ ಆಸ್ಪತ್ರೆಯಲ್ಲಿ ಒಟ್ಟು 9 ಸಾವುಗಳು ಸಂಭವಿಸಿವೆ. ಇದರಲ್ಲಿ ನಾಲ್ವರು ಕೊನೆಯ 4 ಗಂಟೆ ಒಳಗೆ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಮತ್ತೆ ನಾಲ್ವರು 24 ಗಂಟೆಯ ಅವಧಿಯಲ್ಲಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಕೊರೊನಾ ಸಾವುಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸೂಕ್ತ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಗಳ ಅಧ್ಯ ಕ್ಷತೆಯಲ್ಲಿ ಶನಿವಾರ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳು, ಆರೋಗ್ಯ ಅಧಿಕಾರಿಗಳು ಹಾಗೂ ತಜ್ಞ ವೈದ್ಯರುಗಳ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಾಘವನ್, ಲಾಕ್‍ಡೌನ್ ನಂತರ ಮುಂಚಿತವಾಗಿ ತಪಾಸಣೆಗೆ ಒಳಗಾಗುವವರು ಕಡಿಮೆಯಾಗಿದ್ದಾರೆ. ವೈದ್ಯಕೀಯ ಸಿಬ್ಬಂದಿಗಳು ಕೊರೊನಾ ಕಡೆ ಹೆಚ್ಚಿನ ಗಮನ ಹರಿಸಿದ್ದಾರೆ. ಆದರೆ  ಸಕ್ಕರೆ ಕಾಯಿಲೆ, ರಕ್ತದೊತ್ತಡ ಇರುವವರು ಆಸ್ಪತ್ರೆಗೆ ಬರುವುದು ತಡಮಾಡುವುದ ರಿಂದ ಹೆಚ್ಚು ತೊಂದರೆಯಾಗುತ್ತಿದೆ ಎಂದರು. 

ಡಾ. ಮೀನಾಕ್ಷಿ, ನಗರದಲ್ಲಿ ಒಟ್ಟು 70 ಕಂಟೈನ್ ಮೆಂಟ್ ಝೋನ್‌ಗಳಿವೆ. ಆರೋಗ್ಯ ಸಿಬ್ಬಂದಿಗಳ ಸಂಖ್ಯೆಯೂ ಕಡಿಮೆ ಇದೆ. ಜೊತೆಗೆ ಆಶಾ ಕಾರ್ಯಕರ್ತೆ ಯರು ವೈದ್ಯಕೀಯ ಸೇವೆ ಸ್ಥಗಿತಗೊಳಿಸಿ ಮುಷ್ಕರದಲ್ಲಿರು ವುದರಿಂದ ಸರ್ವೇಕ್ಷಣೆ ತಡವಾಗುತ್ತಿದೆ ಎಂದರು.

ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮಾತನಾಡುತ್ತಾ, ಜಿಲ್ಲೆಯಲ್ಲಿ ಕೊರೊನಾದಿಂದ ಸಂಭವಿಸುತ್ತಿರುವ ಸಾವಿನ ಪ್ರಮಾಣ ರಾಜ್ಯದ ಸರಾಸರಿಗಿಂತ ಹೆಚ್ಚಾಗಿದೆ. ಇದು ನಮ್ಮ ಕಾರ್ಯದಕ್ಷತೆಯನ್ನೇ ಪ್ರಶ್ನಿಸುವಂತಿದೆ ಎಂದರು.

ಎಷ್ಟೇ ಕೇಸ್ ಬರಲಿ ನಿಭಾಯಿಸಲು ಜಿಲ್ಲಾಡಳಿತ ತಂಡ ಸಿದ್ದವಾಗಿದೆ. ಈ ನಿಟ್ಟಿನಲ್ಲಿ ನಮ್ಮ ಸರ್ವೇಕ್ಷಣಾ ತಂಡ ಲ್ಯಾಬ್ ಪರೀಕ್ಷಾ ಪ್ರಮಾಣ ಹೆಚ್ಚಿಸಬೇಕು ಹಾಗೂ ತಾಲ್ಲೂಕುವಾರು ನೀಡಿರುವ ಮೊಬೈಲ್ ಕೋವಿಡ್ ಟೆಸ್ಟಿಂಗ್ ವಾಹನಗಳನ್ನು ತೀವ್ರ ಅನಾರೋಗ್ಯ ವ್ಯಕ್ತಿಗಳು ಇರುವ ಮನೆಯ ಬಳಿಯೇ ಸಾಗಿ ಪರೀಕ್ಷೆಗೆ ಒಳಪಡಿಸುವ ಮೂಲಕ ಅದಷ್ಟು ಬೇಗ ಸೋಂಕಿಗೆ ಸಿಲುಕಿರುವರನ್ನು ಹಾಗೂ ಸೋಂಕಿಗೆ ಒಳಗಾಗಿರುವವರನ್ನು ಪತ್ತೆ ಹಚ್ಚಬೇಕಾಗಿದೆ  ಎಂದರು

ಕೇರಳ ರಾಜ್ಯದ ಮಾದರಿಯಲ್ಲಿ ಸಾಮೂಹಿಕ ಸಹಭಾಗಿತ್ವದಲ್ಲಿ ಎಲ್ಲರೂ ಮುಂದೆ ಬಂದು ಕೆಲಸ ಮಾಡಬೇಕು. ನಮ್ಮ ಜನ ಪ್ರತಿನಿಧಿಗಳು, ಮುಖಂಡರೂ, ಈ ಕಾರ್ಯದಲ್ಲಿ ಕೈಜೋಡಿಸಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಜಿ.ಪಂ ಸಿಇಒ ಪದ್ಮಬಸವಂತಪ್ಪ, ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ಉಪವಿಭಾಗಾಧಿಕಾರಿ ಮಮತ ಹೊಸಗೌಡರ್, ಡಿಹೆಚ್‍ಓ ರಾಘವೇಂದ್ರಸ್ವಾಮಿ, ಡಾ.ಸುರೇಂದ್ರ, ಡಾ.ಮಹಾಂತೇಶ್, ಡಾ. ರವಿ, ಡಾ.ಪ್ರಸಾದ್ ಜಿಲ್ಲಾ ಕೋವಿಡ್ ನೋಡೆಲ್ ಅಧಿಕಾರಿ ಪ್ರಮೋದ್ ನಾಯಕ್, ಡಾ.ನಾಗರಾಜ್ ಸೇರಿದಂತೆ ಹಿರಿಯ ಅಧಿಕಾರಿಗಳು ಇದ್ದರು.

error: Content is protected !!