ಬಿಜೆಪಿ ಪರ ಸಿಬಿಐ ಕೆಲಸ ಮಾಡುತ್ತಿದೆ : ಡಿಕೆಶಿ

ಹೊಸಪೇಟೆ, ನ. 22 – ಬಿಜೆಪಿ ಪರವಾಗಿ ಸಿಬಿಐ ಕಾರ್ಯ ನಿರ್ವಹಿಸುತ್ತಿದೆ ಎಂದು ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ. ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆಯಷ್ಟೇ ಶಿವಕುಮಾರ್‌ಗೆ ಸಿಬಿಐ ನೋಟಿಸ್ ಕಳಿಸಿತ್ತು. ಸಿಬಿಐ ತನಿಖೆಯಲ್ಲಿ ತನ್ನನ್ನು ಸಿಲುಕಿಸಲು ಬಿಜೆಪಿ ಯತ್ನ ನಡೆಸುತ್ತಿದೆ. ಆದರೆ, ನಾನು ಕಾಂಗ್ರೆಸ್ ಬಲಪಡಿಸುವಲ್ಲಿ ತೊಡಗಿದ್ದೇನೆ ಎಂದು ಶಿವಕುಮಾರ್ ಅವರು ತಮ್ಮನ್ನು ಭೇಟಿ ಮಾಡಿದ ಪತ್ರಕರ್ತರೊಂದಿಗೆ ಮಾತನಾಡುತ್ತಾ ಹೇಳಿದ್ದಾರೆ.

error: Content is protected !!