ದಾವಣಗೆರೆ, ನ.28- ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಕಾಂಗ್ರೆಸ್ ಕೃಪಾಪೋಷಿತ ನಾಟಕ ಮಂಡಳಿಯಂತೆ ಕೆಲಸ ಮಾಡುತ್ತಿದ್ದಾರೆ ಎಂದು ಮಾಯಕೊಂಡ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಬಿ.ಜಿ. ಸಚಿನ್ ಆರೋಪಿಸಿದ್ದಾರೆ.
ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಾಟಾಳ್ ನಾಗರಾಜ್ ಹೋರಾಟಗಳ ಹಿಂದೆ ಕಾಂಗ್ರೆಸ್ ಕೈವಾಡವಿದೆ. ಅವರ ಹೋರಾಟಗಳಿಗೆ ಕಾಂಗ್ರೆಸ್ನಿಂದ ಹಣ ಸಂದಾಯವಾಗುತ್ತಿದೆ ಎಂದರು.
ಮರಾಠ ಪ್ರಾಧಿಕಾರ ವಿರೋಧಿಸುವ ಭರದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಶಾಸಕರಾದ ಎಂ.ಪಿ.ರೇಣುಕಾಚಾರ್ಯ, ಬಸವನಗೌಡ ಪಾಟೀಲ್ ಯತ್ನಾಳ್ ವಿರುದ್ಧ ವಾಟಾಳ್ ಅವರು ಅಸಂವಿಧಾನಿಕ ಪದ ಬಳಕೆ ಮಾಡಿರುವುದು ಸರಿಯಲ್ಲ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾಯಕೊಂಡ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ
ಬಿ.ಪಿ.ಶಿವಕುಮಾರ್, ಉಪಾಧ್ಯಕ್ಷ ಶರತ್ ಕಂದಗಲ್ ಹಾಜರಿದ್ದರು.