ಕೋವಿಡ್ ಟೆಸ್ಟ್ ಮಾಡಿಸಿಕೊಂಡು ನ್ಯಾಯಾಲಯದಲ್ಲೂ ವ್ಯಾಜ್ಯ ಪರಿಹರಿಸಿಕೊಳ್ಳಬಹುದು.
– ಕೆ.ಬಿ. ಗೀತಾ, ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು
ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವು ರಾಜ್ಯಾದ್ಯಂತ ತಂತ್ರಜ್ಞಾನವನ್ನು ಬಳಸಿಕೊಂಡು ಇ-ಲೋಕ ಅದಾಲತ್ ಆಯೋಜಿಸಿದೆ. ನ್ಯಾಯಾಲಯದಲ್ಲಿ ಚಾಲ್ತಿಯಲ್ಲಿರುವ ಹಾಗೂ ಇನ್ನೂ ದಾಖಲು ಮಾಡದೇ ಇರುವ ರಾಜೀಯಾಗುವಂತಹ ಎಲ್ಲ ಪ್ರಕರಣಗಳಲ್ಲಿ ಪಕ್ಷಗಾರರು ಈ ಪೀಠಗಳ ಮೂಲಕ ತಮ್ಮ ಮನೆಯಿಂದಲೇ ಅಥವಾ ತಮ್ಮ ವಕೀಲರ ಕಚೇರಿಯ ಮೂಲಕ ಪ್ರಕರಣಗಳಲ್ಲಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಹಾಜರಾಗಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು.
ದಾವಣಗೆರೆ, ಡಿ.5- ಇದೇ ದಿನಾಂಕ 19ರಂದು ಜಿಲ್ಲೆಯಲ್ಲಿ ಬೃಹತ್ ಇ- ಲೋಕ್ ಅದಾಲತ್ ಆಯೋಜಿಸಲಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ತಮ್ಮ ಪ್ರಕರಣಗಳನ್ನು ಇತ್ಯರ್ಥಪಡಿಸಿ ಕೊಳ್ಳುವಂತೆ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕೆ.ಬಿ. ಗೀತಾ ತಿಳಿಸಿದರು.
ಅವರು, ಇಂದು ಈ ಬಗ್ಗೆ ನಗರದ ಜಿಲ್ಲಾ ನ್ಯಾಯಾಲಯದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಲೋಕ್ ಅದಾಲತ್ ಮೂಲಕ ಪಕ್ಷಗಾರರು ರಾಜಿಯಾಗ ಬಲ್ಲ ತಮ್ಮ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಸುಲಭವಾಗಿ ಮತ್ತು ಶೀಘ್ರವಾಗಿ ಯಾವುದೇ ಶುಲ್ಕ ವಿಲ್ಲದೇ ಇತ್ಯರ್ಥ ಪಡಿಸಿಕೊಳ್ಳಬಹು ದಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ಪಕ್ಷಗಾರರು ಇ-ಲೋಕ ಅದಾಲ ತ್‍ನಲ್ಲಿ ವಿಡಿಯೋ ಕಾನ್ಫರೆನ್ಸ್, ವಿಡಿಯೋ ಕಾಲ್ ಮೂಲಕ ಹಾಗೂ ಕೋವಿಡ್ ಟೆಸ್ಟ್ ಮಾಡಿಸಿಕೊಂಡು ನ್ಯಾಯಾಲಯಕ್ಕೂ ಕೂಡ ಹಾಜ ರಾಗಿ ತಮ್ಮ ವ್ಯಾಜ್ಯಗಳನ್ನು ಪರಿಹರಿಸಿ ಕೊಳ್ಳಬಹುದು ಎಂದು ಹೇಳಿದರು.
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯಕಾರಿ ಅಧ್ಯಕ್ಷ ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರು ಬೃಹತ್ ಇ-ಲೋಕ್ ಅದಾಲತ್ ಮೂಲಕ ಅತಿ ಹೆಚ್ಚು ಪ್ರಕರಣ ವಿಲೇವಾರಿ ಮಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಉದ್ದೇಶಿಸಿ ದ್ದು, ಈ ಪ್ರಕಾರವಾಗಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಜಿಲ್ಲೆಯ ಎಲ್ಲಾ ತಾಲ್ಲೂಕು ಕಾನೂನು ಸೇವಾ ಸಮಿತಿಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಬೆಳಗ್ಗೆ 10.30ರಿಂದ ಸಂಜೆ 5ರವರೆಗೆ ಇ-ಲೋಕ್ ಅದಾಲತ್ ನಡೆಸುವ ಬಗ್ಗೆ ವ್ಯವಸ್ಥೆ ಮಾಡಿಕೊಂಡಿವೆ ಎಂದು ಮಾಹಿತಿ ನೀಡಿದರು.
ಕೋವಿಡ್ ಸಂದರ್ಭದಲ್ಲಿ ಆದಾಯ ಕಡಿಮೆ ಇರುವ ಪರಿಸ್ಥಿತಿ ಯಲ್ಲಿ ತಮ್ಮ ವ್ಯಾಜ್ಯಗಳನ್ನು ಇ- ಲೋಕ ಅದಾಲತ್ ಮೂಲಕ ಇತ್ಯ ರ್ಥಪಡಿಸಿಕೊಂಡರೆ ಕಕ್ಷಿಗಾರರಿಗೆ ಮತ್ತು ವಕೀಲರಿಗೆ ಹೆಚ್ಚಿನ ಅನುಕೂಲ ಇದೆ.
ಇ-ಲೋಕ್ ಅದಾಲತ್‍ನಲ್ಲಿ ರಾಜೀ ಮೂಲಕ ಇತ್ಯರ್ಥಪಡಿಸಿ ಕೊಳ್ಳುವ ಪ್ರಕರಣಗಳಿಗೆ ನ್ಯಾಯಾಲ ಯಗಳ ಸಂಪೂರ್ಣ ಶುಲ್ಕ ಮರುಪಾವತಿ ಮಾಡಲಾಗುವುದು. ವ್ಯಾಜ್ಯಪೂರ್ವ ಪ್ರಕರಣಗಳಿಗೆ ನ್ಯಾಯಾಲಯಗಳ ಶುಲ್ಕ ಕೊಡಬೇ ಕಾಗಿಲ್ಲ ಹಾಗೂ ಇಲ್ಲಿ ಇತ್ಯರ್ಥ ವಾಗುವ ಪ್ರಕರಣಗಳಿಗೆ ಮೇಲ್ಮನವಿ ಇಲ್ಲ. ರಿವಿಜನ್ ಅರ್ಜಿ ಇಲ್ಲ. ಕಕ್ಷಿದಾ ರರಿಗೆ ಸಂಪೂರ್ಣ ಶುಲ್ಕ ಮರು ಪಾವತಿ ಆಗುವುದರಿಂದ ಹಣವೂ ಉಳಿತಾಯ ಆಗುತ್ತದೆ. ಈ ನ್ಯಾಯಾ ಲಯದ ತೀರ್ಪೇ ಅಂತಿಮವಾಗಿದ್ದು, ಪಕ್ಷಗಾರರು ಅಪೀಲು ಹೋಗಲು ಅವಕಾಶವಿಲ್ಲ ಎಂದರು.
ವ್ಯಾಜ್ಯ ಪೂರ್ವ ಮತ್ತು ರಾಜೀ ಪ್ರಕರಣಗಳ ಇತ್ಯರ್ಥ ಸಾಧ್ಯ: ಅಪ ಘಾತಕ್ಕೆ ಸಂಬಂಧಿಸಿದ ಪರಿಹಾರ ಪ್ರಕರಣಗಳು, ಪಾಲುವಿಭಾಗ ಕೋರಿ ಸಲ್ಲಿಸುವ ದಾವೆಗಳು, ಹಣ ವಾಪಸ್ಸಾತಿ ದಾವೆಗಳು, ಬಾಡಿಗೆದಾರ ಮತ್ತು ಮಾಲೀಕರ ನಡುವಿನ ದಾವೆ ಗಳು, ಇತರೆ ಸಿವಿಲ್ ವ್ಯಾಜ್ಯಗಳು ಹಾಗೂ ರಾಜೀ ಮಾಡಿಕೊಳ್ಳಬಹು ದಾದ ಕ್ರಿಮಿನಲ್ ಪ್ರಕರಣಗಳು, ಚೆಕ್ ಬೌನ್ಸ್ ಪ್ರಕರಣಗಳು, ಜೀವ ನಾಂಶದ ಅರ್ಜಿ ಪ್ರಕರಣಗಳು, ಕೌಟುಂಬಿಕ (ವಿಚ್ಚೇದನವನ್ನು ಹೊರ ತುಪಡಿಸಿ) ಕಲಹಗಳು ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಬಹುದು ಎಂದರು.
ಬಾಕಿ ಇರುವ ಪ್ರಕರಣಗಳು : ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ಭೂಸ್ವಾಧೀನ ಪ್ರಕರ ಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು, ಕಂದಾಯ ಪ್ರಕರಣಗಳು (ಜಿಲ್ಲಾ ಹಾಗೂ ಉಚ್ಚ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳು ಮಾತ್ರ), ಸಿವಿಲ್ ಪ್ರಕರಣಗಳನ್ನು (ಬಾಡಿಗೆ, ಅನುಭೋಗದ ಹಕ್ಕುಗಳ ನಿರ್ಬಂ ಧಾಜ್ಞೆ ಮೊಕದ್ದಮೆಗಳು) ಲೋಕ ಅದಾಲತ್‍ನಲ್ಲಿ ಬಗೆಹರಿಸಲಾಗು ವುದು. ಈ ದಿನಾಂಕಗಳ ಹೊರತಾ ಗಿಯೂ ಸತತವಾಗಿ ನಡೆಯುವ ಲೋಕ ಅದಾಲತ್ ಮುಖಾಂತರ ಕೂಡ ಕಕ್ಷಿದಾರರು ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು ಎಂದರು.
ಆಸಕ್ತ ಕಕ್ಷಿಗಾರರು ಹೆಚ್ಚಿನ ಮಾಹಿತಿಗಾಗಿ ಇಮೇಲ್ [email protected] ಮತ್ತು ದೂರವಾಣಿ ಸಂಖ್ಯೆ 08192-296364, 9964924792 ಮೂಲಕ ಜಿಲ್ಲೆಯ ಕಾನೂನು ಸೇವೆ ಗಳ ಪ್ರಾಧಿಕಾರದ ಕಚೇರಿಯನ್ನು ಸಂಪರ್ಕಿಸಬಹುದು ಎಂದರು.
ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಎಲ್.ಹೆಚ್. ಅರುಣ್‍ಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ಸತತ ಮೂರು ವರ್ಷಗಳಿಂದ ಲೋಕ್ ಅದಾಲತ್ ಮೂಲಕ ಹೆಚ್ಚಿನ ಪ್ರಕರಣಗಳನ್ನು ಇತ್ಯರ್ಥಗೊಳಿಸುವ ಜೊತೆಗೆ ಪರಿ ಹಾರವನ್ನು ಕಂಡುಕೊಳ್ಳುವ ಕಾರ್ಯ ಹಾಗೂ ಸಕ್ರಿಯವಾಗಿ ಕಾನೂನು ಅರಿವು ಮೂಡಿಸುವುದರಲ್ಲಿ ಬೆಂಗಳೂರು ನಗರ ಹೊರತುಪಡಿಸಿ ರಾಜ್ಯದಲ್ಲಿಯೇ ನಮ್ಮ ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ ಎಂದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿ ಕಾರದ ಸದಸ್ಯ ಕಾರ್ಯದರ್ಶಿಗಳು ಮತ್ತು ಹಿರಿಯ ಸಿವಿಲ್ ನ್ಯಾಯಾಧೀ ಶರಾದ ಸಾಬಪ್ಪ ಹಾಗೂ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎನ್.ಟಿ. ಮಂಜುನಾಥ್ ಮಾತನಾಡಿದರು.