ದಾವಣಗೆರೆ, ಡಿ. 5 – ಗ್ರಾಮ ಪಂಚಾಯ್ತಿ ಚುನಾವಣೆಗಳಿಗಾಗಿ ಮುಖಂಡರಿಗೆ ಕಾಂಗ್ರೆಸ್ ಪಕ್ಷದಿಂದ ವಿಧಾನಸಭಾ ಕ್ಷೇತ್ರವಾರು ಜವಾಬ್ದಾರಿಗಳನ್ನು ನೀಡಲಾಗಿದೆ. ಶಾಸಕರು, ಪರಿಷತ್ ಸದಸ್ಯರು ಹಾಗೂ ಇತರೆ ಮುಖಂಡರು ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕೆಂದು ಸೂಚಿಸಲಾಗಿದೆ.
ಅದರಂತೆ ದಾವಣಗೆರೆ ದಕ್ಷಿಣ ಕ್ಷೇತ್ರದ ವ್ಯಾಪ್ತಿಗೆ ಬರುವ ಗ್ರಾಮ ಪಂಚಾಯ್ತಿಗಳ ಜವಾಬ್ದಾರಿಯನ್ನು ಶಾಸಕ ಶಾಮನೂರು ಶಿವಶಂಕರಪ್ಪ ಅವರಿಗೆ ನೀಡಲಾಗಿದೆ. ದಾವಣಗೆರೆ ಉತ್ತರ ಮತ್ತು ಮಾಯಕೊಂಡ ಕ್ಷೇತ್ರಗಳ ಜವಾಬ್ದಾರಿಯನ್ನು ಮಾಜಿ ಸಚಿವ ಶಾಮನೂರು ಮಲ್ಲಿಕಾರ್ಜುನ್, ಹರಿಹರದ ಜವಾಬ್ದಾರಿಯನ್ನು ಶಾಸಕ ರಾಮಪ್ಪ, ಚನ್ನಗಿರಿ ಜವಾಬ್ದಾರಿಯನ್ನು ಮಾಜಿ ಶಾಸಕ ವಡ್ನಾಳ್ ರಾಜಣ್ಣ, ಹೊನ್ನಾಳಿ ಜವಾಬ್ದಾರಿಯನ್ನು ಮಾಜಿ ಶಾಸಕ ಡಿ.ಜಿ. ಶಾಂತನಗೌಡ ಹಾಗೂ ಜಗಳೂರಿನ ಜವಾಬ್ದಾರಿಯನ್ನು ಮಾಜಿ ಶಾಸಕ ಅಬ್ದುಲ್ ಜಬ್ಬಾರ್ ಅವರಿಗೆ ನೀಡಲಾಗಿದೆ.
ಹರಪನಹಳ್ಳಿ ಜವಾಬ್ದಾರಿಯನ್ನು ಶಾಸಕ ಅಲ್ಲಂ ವೀರಭದ್ರಪ್ಪ, ಕೂಡ್ಲಿಗಿ ಜವಾಬ್ದಾರಿಯನ್ನು ಮಾಜಿ ಸಂಸದ ವಿ.ಎಸ್. ಉಗ್ರಪ್ಪ, ಹಡಗಲಿ ಜವಾಬ್ದಾರಿಯನ್ನು ಶಾಸಕ ಪಿ.ಟಿ. ಪರಮೇಶ್ವರನಾಯ್ಕ ಅವರಿಗೆ ನೀಡಲಾಗಿದೆ.
ರಾಣೇಬೆನ್ನೂರಿನ ಜವಾಬ್ದಾರಿಯನ್ನು ಮಾಜಿ ಶಾಸಕ ಕೆ.ಬಿ. ಕೋಳಿವಾಡ ಅವರಿಗೆ ವಹಿಸಲಾಗಿದೆ.