ದಾವಣಗೆರೆ, ಡಿ.19- ಜಿಲ್ಲೆಯಾದ್ಯಂತ ಸಾಮಾಜಿಕ ಅಂತರವಿಲ್ಲದೇ ಹೆಚ್ಚಿನ ಜನರು ಸೇರುವ ಸಾಮೂಹಿಕ ಕೂಟ (ಪಾರ್ಟಿ)ಗಳನ್ನು ಸಾರ್ವಜನಿಕ ಸ್ಥಳ, ವಸತಿ ಸಮು ಚ್ಚಯಗಳಲ್ಲಿ ಪಾರ್ಟಿ ಆಯೋಜಿಸುವುದನ್ನು ನಿಷೇಧಿಸಿರು ವುದಾಗಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.
ಕೋವಿಡ್-19 ಸೋಂಕು ಹರಡುವಿಕೆಯನ್ನು ನಿಯಂತ್ರಿಸುವ ಸಂಬಂಧ ರಾಜ್ಯ ಸರ್ಕಾರ ಈ ಬಗ್ಗೆ ಆದೇಶ ಹೊರಡಿಸಿರುತ್ತದೆ. ಈ ಆದೇಶವು ಡಿ.31 ರವರೆಗೆ ಜಾರಿಯಲ್ಲಿರುತ್ತದೆ ಎಂದವರು ಹೇಳಿದ್ದಾರೆ.
ಚರ್ಚ್‍ಗಳಲ್ಲಿ ಒಮ್ಮೆಲೇ ಹೆಚ್ಚು ಜನರು ಸೇರದಂತೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ಮೇಲ್ವಿ ಚಾರಕರು ಕಟ್ಟುನಿಟ್ಟಿನ ಕ್ರಮ ವಹಿಸಬೇಕು. ಸಾರ್ವಜನಿಕ ಹಸ್ತಲಾಘವ ಮತ್ತು ಆಲಿಂಗನವನ್ನು ನಿಷೇಧಿಸಿದೆ.
ಇದೇ ದಿನಾಂಕ 30 ರಿಂದ ಜನವರಿ 2 ರವರೆಗೆ ಕ್ಲಬ್, ಪಬ್, ರೆಸ್ಟೋರೆಂಟ್ ಹಾಗೂ ಅದೇ ತೆರನಾದ ಪ್ರದೇಶಗಳಲ್ಲಿ ಸಾಮಾಜಿಕ ಅಂತರವಿಲ್ಲದೇ ಹೆಚ್ಚು ಜನರು ಸೇರುವ ವಿಶೇಷ ಯೋಜಿತ ಒಟ್ಟುಗೂಡುವಿಕೆ, ವಿಶೇಷ ಡಿ.ಜೆ.ಡಾನ್ಸ್ ಕಾರ್ಯಕ್ರಮಗಳನ್ನು, ವಿಶೇಷ ಪಾರ್ಟಿ ಇತ್ಯಾದಿ ನಿಷೇಧಿಸಿದೆ. ಆದರೆ ಕ್ಲಬ್/ಪಬ್/ರೆಸ್ಟೋರೆಂಟ್‍ಗಳನ್ನು ಪ್ರತಿನಿತ್ಯದಂತೆ ತೆರೆದಿದ್ದು, ನಡೆಸಲು ನಿರ್ಬಂಧವಿಲ್ಲ. ಸರ್ಕಾರದ ಆದೇಶ ಉಲ್ಲಂಘಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಹೇಳಿದ್ದಾರೆ.