ವಾಲ್ಮೀಕಿ ಸಮಾಜಕ್ಕೆ ಮೀಸಲಾತಿ ನೀಡದಿದ್ದರೆ ವಿಧಾನಸೌಧ ಮುತ್ತಿಗೆ

ದಾವಣಗೆರೆ, ಸೆ.10-  ಬರುವ ಅಧಿವೇಶನದಲ್ಲಿ ವಾಲ್ಮೀಕಿ ನಾಯಕ ಸಮಾಜಕ್ಕೆ ಶೇ. 7.5 ರಷ್ಟು ಮೀಸ ಲಾತಿ ನೀಡದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ ಪ್ರತಿ ಭಟನೆ ನಡೆಸಲಾಗುವುದು ಎಂದು ವಾಲ್ಮೀಕಿ ನಾಯಕ ವಿದ್ಯಾರ್ಥಿ ನಿಲಯದ ಅಧ್ಯಕ್ಷ ಬಿ. ವೀರಣ್ಣ ತಿಳಿಸಿದ್ದಾರೆ.

ರಾಜ್ಯದಲ್ಲಿ ಸುಮಾರು 75 ಲಕ್ಷ ಜನಸಂಖ್ಯೆ ಹೊಂದಿರುವ  ವಾಲ್ಮೀಕಿ ನಾಯಕ ಸಮಾಜಕ್ಕೆ ಶೇ 7.5 ರಷ್ಟು ಮೀಸಲಾತಿ ನೀಡಬೇಕು. ವಾಲ್ಮೀಕಿ ಸಮಾಜ ಬಾಂಧವರು ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸೇರಿದಂತೆ ವಿವಿಧ ವಲಯಗಳಲ್ಲಿ  ಹಿಂದುಳಿದಿದ್ದಾರೆ. ಕಳೆದ 4 ದಶಕಗಳಿಂದ ಶ್ರೀಗಳ ನೇತೃತ್ವದಲ್ಲಿ ಪಾದಯಾತ್ರೆ ಸೇರಿದಂತೆ ವಿವಿಧ ರೀತಿಯ ಹೋರಾಟಗಳನ್ನು ಶಾಂತಿ ಯುತವಾಗಿ ಮಾಡಿಕೊಂಡು ಸರ್ಕಾರಕ್ಕೆ ಎಚ್ಚರಿಕೆ ನೀಡಿ ದ್ದರೂ ಸಹ ವಾಲ್ಮೀಕಿ ನಾಯಕ ಸಮಾಜಕ್ಕೆ ಮೀಸಲಾತಿ ನೀಡಲು ಸರ್ಕಾರ ಮೀನಾಮೇಷ ಎಣಿಸುತ್ತಿರುವುದು ಖಂಡನೀಯ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದೇ ದಿನಾಂಕ 21ರಂದು ನಡೆಯುವ ಅಧಿವೇಶನದಲ್ಲಿ ವಾಲ್ಮೀಕಿ ನಾಯಕ ಸಮಾಜಕ್ಕೆ ಶೇ 7.5ರಷ್ಟು ಮೀಸಲಾತಿ ನೀಡದಿದ್ದರೆ ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಪುರಿ ಸ್ವಾಮಿಜಿ ಆದೇಶ ನೀಡಿದರೆ ರಾಜ್ಯದ 75 ಲಕ್ಷ ಜನರು ವಿಧಾನಸೌಧಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು. 

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಾಲ್ಮೀಕಿ ನಾಯಕ ಸಮಾಜದ ಬೆಂಬಲದಿಂದ ಅಧಿಕಾ ರಕ್ಕೆ ಬಂದಿದ್ದಾರೆ. ಸಮಾಜಕ್ಕೆ 24 ಗಂಟೆಯೊಳಗೆ ಮೀಸ ಲಾತಿ ನೀಡುವುದಾಗಿ ಘೋಷಿಸಿದ್ದರು. ಆದರೆ ವರ್ಷ ಕಳೆ ದರೂ ನುಡಿದಂತೆ ನಡೆಯಲಿಲ್ಲ ಎಂದು ಕಿಡಿ ಕಾರಿದರು. 

ಆರೋಗ್ಯ ಸಚಿವ ಶ್ರೀರಾಮುಲು ನೇತೃತ್ವದಲ್ಲಿ ಸರ್ವಪಕ್ಷಗಳ ಮುಖಂಡರೊಂದಿಗೆ ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಿ ಮತ್ತೊಮ್ಮೆ ಮನವಿ ಸಲ್ಲಿಸಲಾಗುವುದು ಎಂದವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಹದಡಿ ಹಾಲಪ್ಪ, ಹೊದಿಗೆರೆ ರಮೇಶ್, ಓಬಳಪ್ಪ ಇದ್ದರು.

error: Content is protected !!