ದಾವಣಗೆರೆ, ಸೆ.26- ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಜಿಲ್ಲೆಯಾದ್ಯಂತ ಕೊರೊನಾ ಬಗ್ಗೆ ಜಾಗೃತಿ ಮೂಡಿಸುವ ಕೋವಿಡ್-19 ಜಾಗೃತಿ ಟ್ಯಾಬ್ಲೋ ವಾಹನಕ್ಕೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಇಂದು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಆರ್‍ಸಿಹೆಚ್‍ಓ ಡಾ. ಮೀನಾಕ್ಷಿ, ಡಾ. ಸುರೇಶ್ ಬಾರ್ಕಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಡಿ. ಅಶೋಕ್‍ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.