ದಾವಣಗೆರೆ, ಜ. 29- ನಗರದ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರದ ಸಂಗೀತ ಶಿಕ್ಷಕರಾದ ಶೋಭಾ ರಂಗನಾಥ್ ಅವರು `ಸ್ವಾಮಿ ವಿವೇಕಾನಂದ ಸದ್ಭಾವನಾ’ ಪ್ರಶಸ್ತಿ ಗೆ ಭಾಜನರಾಗಿದ್ದಾರೆ.
ಸಂಗೀತ ತರಬೇತಿ ನೀಡುತ್ತಿರುವ ಶೋಭಾ ಅವರ ಸೇವೆಯನ್ನು ಪರಿಗಣಿಸಿ, ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ರಾಜ್ಯಾಧ್ಯಕ್ಷ ಡಾ.ಎಸ್. ಬಾಲಾಜಿ, ವಿಜಯಪುರ ಜಿಲ್ಲೆಯ ಜಿಲ್ಲಾಧ್ಯಕ್ಷ ಪುಂಡಲೀಕ ಮುರಳ್ ಅವರನ್ನೊಳಗೊಂಡ ಸಮಿತಿಯು ಈ ಪ್ರಶಸ್ತಿಗೆ ಆಯ್ಕೆ ಮಾಡಿದೆ.