ಆನಗೋಡು ಸಮೀಪ ಅಪರಿಚಿತ ವಾಹನ ತುಳಿತಕ್ಕೆ ಚಿರತೆ ಸಾವು

ದಾವಣಗೆರೆ, ಫೆ.8- ಅಪರಿಚಿತ ವಾಹನ ತುಳಿತಕ್ಕೆ ಸಿಲುಕಿ ಚಿರತೆ ಸಾವಿಗೀಡಾಗಿರುವ ಘಟನೆ ಆನಗೋಡು ಗ್ರಾಮದ ಬಳಿ ತಡರಾತ್ರಿ ನಡೆದಿದೆ. ಚಿರತೆಯೊಂದು ರಸ್ತೆ ದಾಟುವಾಗ ವಾಹನ ಡಿಕ್ಕಿ ಹೊಡೆದ ರಭಸಕ್ಕೆ ಸ್ಥಳದಲ್ಲೇ ಮೃತಪಟ್ಟಿದೆ. ಇತ್ತೀಚೆಗೆ ಆನಗೋಡು ಗ್ರಾಮದ ಸುತ್ತಮುತ್ತ ಚಿರತೆ ಓಡಾಡುತ್ತಿದ್ದ ಬಗ್ಗೆ ಗ್ರಾಮಸ್ಥರು ಭಯಭೀತರಾಗಿದ್ದರು. ಈ ಬಗ್ಗೆ ಅರಣ್ಯ ಅಧಿಕಾರಿಗಳ ಗಮನಕ್ಕೂ ತಂದಿದ್ದರು. ಇದೀಗ ಅಪರಿಚಿತ ವಾಹನ ಡಿಕ್ಕಿಯಾಗಿ ಚಿರತೆ ಸಾವನ್ನಪ್ಪಿದೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

error: Content is protected !!