ನಗರದಲ್ಲಿ ನಾಳೆ ಕೆಪಿಎಸ್ಸಿ ಸಹಾಯಕ ಇಂಜಿನಿಯರ್ ಹುದ್ದೆಗೆ ಸ್ಪರ್ಧಾತ್ಮಕ ಪರೀಕ್ಷೆ

ಜಿಲ್ಲೆಯಲ್ಲಿ 15 ಪರೀಕ್ಷಾ ಕೇಂದ್ರಗಳು- ಪಾರದರ್ಶಕ ಪರೀಕ್ಷೆಗೆ ಬಿಗಿ ಕ್ರಮ : ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್

ದಾವಣಗೆರೆ, ಫೆ.23- ಕರ್ನಾಟಕ ಲೋಕಸೇವಾ ಆಯೋಗದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಇಂಜಿನಿಯರ್ ಗ್ರೇಡ್-1 ಹುದ್ದೆಗಾಗಿ ನಾಡಿದ್ದು ದಿನಾಂಕ 25 ಮತ್ತು 26 ರಂದು ನಗರದಲ್ಲಿ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಯನ್ನು  ಪಾರದರ್ಶಕ ಹಾಗೂ ಸುಗಮವಾಗಿ ಕೈಗೊಳ್ಳುವ ನಿಟ್ಟಿನಲ್ಲಿ ನಿಯೋಜಿತ  ಅಧಿಕಾರಿಗಳು ಕ್ರಮ ವಹಿಸುವಂತೆ ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್ ಸೂಚನೆ ನೀಡಿದರು. 

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ  ಇಂದು ಏರ್ಪಡಿಸಿದ್ದ  ಕರ್ನಾಟಕ ಲೋಕಸೇವಾ ಆಯೋಗದ ಸಹಾಯಕ ಇಂಜಿನಿಯರ್ ಹುದ್ದೆ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ಸಿದ್ಧತೆ ಸಭೆಯಲ್ಲಿ  ಮಾತನಾಡಿದ ಅವರು, ನಾಡಿದ್ದು ದಿನಾಂಕ 25 ರಂದು ಜಿಲ್ಲೆಯ 15 ಹಾಗೂ ದಿನಾಂಕ 26 ರಂದು 04 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗುತ್ತದೆ ಎಂದು ಹೇಳಿದರು.

ಪರೀಕ್ಷೆ ಕೊಠಡಿಯೊಳಗೆ ವಾಚ್, ಕ್ಯಾಲ್ಕ್ಯು ಲೇಟರ್, ಬ್ಲೂಟೂತ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೊಠಡಿಗಳಲ್ಲಿ ಕಡ್ಡಾಯವಾಗಿ ಗಡಿಯಾರಗಳನ್ನು ಅಳವಡಿಸಬೇಕು. ಪರೀಕ್ಷೆಯಲ್ಲಿ ಅವ್ಯವಹಾರವನ್ನು ತಡೆಯುವ ಸಲುವಾಗಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶ ವೆಂದು ಜಿಲ್ಲಾಧಿಕಾರಿಗಳು ಆದೇಶಿಸಿದ್ದು, ಸಮೀಪ ವಿರುವ ಜೆರಾಕ್ಸ್ ಅಂಗಡಿಗಳನ್ನು ಪೊಲೀಸರ ಸಹಾಯದಿಂದ ಮುಚ್ಚಿಸಬೇಕು ಎಂದರು.

ಪರೀಕ್ಷಾ ಕೇಂದ್ರಗಳು: ನಾಡಿದ್ದು ದಿನಾಂಕ 25 ರ ಶನಿವಾರ  ಮಧ್ಯಾಹ್ನ 3 ರಿಂದ 5 ರವರೆಗೆ  ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿನ ಸಹಾಯಕ ಇಂಜಿನಿಯರ್ ಗ್ರೇಡ್‌-1 ಹುದ್ದೆಗಳಿಗೆ ಹಾಗೂ ವಿವಿಧ ಗ್ರೂಪ್ ಎ, ಬಿ ಮತ್ತು ಸಿ ವೃಂದದ ಹುದ್ದೆಗಳಿಗೆ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ  ಮೋತಿ ವೀರಪ್ಪ ಪದವಿಪೂರ್ವ ಕಾಲೇಜು, ಸೀತಮ್ಮ ಬಾಲಕಿಯರ ಪದವಿಪೂರ್ವ ಕಾಲೇಜು, ಎಕ್ಸ್‌-ಮುನ್ಸಿಪಲ್ ಕಾಲೇಜು ಮತ್ತು ಸರ್ಕಾರಿ ಬಾಲಕರ ಪದವಿಪೂರ್ವ ಕಾಲೇಜು, ಡಿ.ಜೆ.ವಿ ಸರ್ಕಾರಿ ಶಾಲೆ, ಆವರಗೆರೆಯ ಸರ್ಕಾರಿ ಶಾಲೆ, ಡಿ.ಆರ್‌.ಆರ್ ಸರ್ಕಾರಿ ಶಾಲೆ, ಎಂ.ಎಸ್.ಬಿ ಕಾಲೇಜ್, ಮುದೇಗೌಡ್ರು ಮಲ್ಲಮ್ಮ ಮುರಿಗೆಪ್ಪ ಮಹಿಳಾ ಶಾಲೆ, ಮಹಿಳಾ ಸೇವಾ ಸಮಾಜ, ಎಸ್.ಟಿ.ಐ ಕಾಲೇಜ್, ಸೆಂಟ್ ಪಾಲ್ಸ್ ಕಾನ್ವೆಂಟ್ ಸ್ಕೂಲ್, ಡಿಆರ್‍ಎಂ ವಿಜ್ಞಾನ ಕಾಲೇಜ್ ಹಾಗೂ ಎಸ್.ಕೆ.ಎ.ಹೆಚ್ ಕಾಲೇಜ್‌ಗಳಲ್ಲಿ  ಪರೀಕ್ಷೆ ನಡೆಸಲಾಗುವುದು. 

ದಿನಾಂಕ 26 ರಂದು ಬೆಳಿಗ್ಗೆ 10 ರಿಂದ 11.30ರವರೆಗೆ ಪತ್ರಿಕೆ-1 ಸಾಮಾನ್ಯ ಪತ್ರಿಕೆ ಹಾಗೂ ಮಧ್ಯಾಹ್ನ 2 ರಿಂದ 4 ರವರೆಗೆ ಪತ್ರಿಕೆ-2 ನಿರ್ದಿಷ್ಟ ಪತ್ರಿಕೆ ವಿಷಯ ಕುರಿತಂತೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿನ ಸಹಾಯಕ ಇಂಜನಿಯರ್ ಗ್ರೇಡ್-1 ಹುದ್ದೆಗಳಿಗೆ ಮೋತಿ ವೀರಪ್ಪ ಪದವಿಪೂರ್ವ ಕಾಲೇಜು, ಸೀತಮ್ಮ ಬಾಲಕಿಯರ ಪದವಿಪೂರ್ವ ಕಾಲೇಜು, ಎಕ್ಸ್‌-ಮುನ್ಸಿಪಲ್ ಕಾಲೇಜು ಮತ್ತು ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನಲ್ಲಿ ಪರೀಕ್ಷೆ ನಡೆಯಲಿದೆ.  

ಸಭೆಯಲ್ಲಿ ಉಪವಿಭಾಗಾಧಿಕಾರಿ ದುರ್ಗಾಶ್ರೀ, ಹೊನ್ನಾಳಿ ಉಪವಿಭಾಗಾಧಿಕಾರಿ ಹುಲ್ಲುಮನಿ ತಿಮ್ಮಣ್ಣ,  ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ತಿಪ್ಪೇಶಪ್ಪ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಿವಾನಂದ ಪವಾರ್‌ ಶೆಟ್ಟರ್ ಶಿಕ್ಷಣಾಧಿಕಾರಿ ರಾಜಶೇಖರ್, ಪರೀಕ್ಷಾ ನಿಯೋಜಿತ ಅಧಿಕಾರಿಗಳು ಉಪಸ್ಥಿತರಿದ್ದರು.

error: Content is protected !!