ಮಹಾನಗರಪಾಲಿಕೆ ಮಾಲೀಕತ್ವದ ಹಳೇ ಖಾಸಗಿ ಬಸ್ ನಿಲ್ದಾಣವನ್ನು ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ಪುನರ್ ನಿರ್ಮಿಸಲಾಗಿದ್ದು, ಈ ಬಸ್ ನಿಲ್ದಾಣದ ಉದ್ಘಾಟನಾ ಸಮಾರಂಭವು ಇಂದು ಬೆಳಿಗ್ಗೆ 10.30 ಕ್ಕೆ ನಡೆಯಲಿದೆ.
ನಗರಾಭಿವೃದ್ದಿ ಸಚಿವರೂ ಆಗಿರುವ ಜಿಲ್ಲಾ ಉಸ್ತವಾರಿ ಸಚಿವ ಬಿ.ಎ. ಬಸವರಾಜ (ಭೈರತಿ) ಕಾರ್ಯಕ್ರಮ ಉದ್ಘಾಟಿಸುವರು. ಸಂಸದ ಜಿ.ಎಂ ಸಿದ್ದೇಶ್ವರ, ಹಿರಿಯ ಶಾಸಕರುಗಳಾದ ಶಾಮನೂರು ಶಿವಶಂಕರಪ್ಪ, ಎಸ್.ಎ ರವೀಂದ್ರನಾಥ್ ಹಾಗೂ ಇತರೆ ಗಣ್ಯರು ಉಪಸ್ಥಿತರಿವರು.
ಖಾಸಗಿ ಬಸ್ ಮಾಲೀಕರ ಕರೆ : ನವೀಕೃತ ಖಾಸಗಿ ಬಸ್ ನಿಲ್ದಾಣದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವ ಸಂಬಂಧ ಖಾಸಗಿ ಬಸ್ ಮಾಲೀಕರು ಖಾಸಗಿ ಬಸ್ ಮಾಲೀಕರ ಸಂಘದ ಕಚೇರಿ ಬಳಿ ಇಂದು ಬೆಳಿಗ್ಗೆ 9.30ಕ್ಕೆ ಆಗಮಿಸುವಂತೆ ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ಕೆ.ಎಸ್. ಮಲ್ಲೇಶಪ್ಪ ಕೋರಿದ್ದಾರೆ.