ವಿಶ್ವ ಕನ್ನಡ ಸಮ್ಮೇಳನದ ಆಯೋಜನೆಗೆ ವಿಶೇಷಾಧಿಕಾರಿ ನೇಮಕಕ್ಕೆ ಮನವಿ

ವಿಶ್ವ ಕನ್ನಡ ಸಮ್ಮೇಳನದ ಆಯೋಜನೆಗೆ ವಿಶೇಷಾಧಿಕಾರಿ ನೇಮಕಕ್ಕೆ ಮನವಿ - Janathavaniದಾವಣಗೆರೆ, ಮಾ. 14- ನಗರದಲ್ಲಿ ನಡೆಸಲು ಉದ್ದೇಶಿಸಿ ರುವ ವಿಶ್ವಕನ್ನಡ ಸಮ್ಮೇಳನದ ಆಯೋಜನೆಗೆ ವಿಶೇಷಾಧಿಕಾರಿ ಯನ್ನು ನೇಮಕ ಮಾಡುವಂತೆ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಬಿ. ವಾಮದೇವಪ್ಪ ಅವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

2023-24 ನೇ ಸಾಲಿನ ಆಯವ್ಯಯ ಮಂಡನೆಯಲ್ಲಿ ಮೂರನೇ ವಿಶ್ವ ಕನ್ನಡ ಸಮ್ಮೇಳನವನ್ನು ದಾವಣಗೆರೆಯಲ್ಲಿ ಆಯೋಜಿಸುವುದಾಗಿ ಪ್ರಕಟಿಸಿರುವ  ರಾಜ್ಯ ಸರ್ಕಾರದ ಕ್ರಮವನ್ನು ಸ್ವಾಗತಿಸಿರುವ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಬಿ. ವಾಮದೇವಪ್ಪ ಅವರು  ವಿಶೇಷಾಧಿಕಾರಿ ನೇಮಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಪತ್ರದ ಮೂಲಕ ಒತ್ತಾಯಿಸಿದ್ದಾರೆ.

ದಾವಣಗೆರೆ ನಗರ ಶೈಕ್ಷಣಿಕವಾಗಿ, ಸಾಂಸ್ಕೃತಿಕವಾಗಿ ಸಿರಿವಂತಿಕೆಯನ್ನು ಹೊಂದಿದೆ. ಅನೇಕ ಸಾಹಿತಿಗಳು, ಕವಿಗಳು, ವಿದ್ವಾಂಸರು, ಕಲಾವಿದರು ಇದ್ದಾರೆ. ಅಲ್ಲದೇ ವಿಶ್ವದ ಕನ್ನಡಿಗರನ್ನು ಒಗ್ಗೂಡಿಸಿ ಕನ್ನಡ ನಾಡು, ನುಡಿ, ಕಲೆ, ಸಾಹಿತ್ಯ, ಸಂಸ್ಕೃತಿಗಳ ಅನಾವರಣಗೊಳಿ ಸಲು ಕನ್ನಡ ನಾಡಿನ ಹೃದಯ ವೆಂದೇ ಹೆಸರಾಗಿರುವ ದಾವಣ ಗೆರೆಯು ಸಕಲ ರೀತಿಯಿಂದಲೂ ವಿಶ್ವ ಕನ್ನಡ ಸಮ್ಮೇಳನ ನಡೆಸಲು ಸೂಕ್ತ ಸ್ಥಳವಾಗಿದೆ ಎಂದಿದ್ದಾರೆ.

ಈ ವರ್ಷವೇ ಸಮ್ಮೇಳನವನ್ನು ಆಯೋ ಜಿಸಲು ಸರ್ಕಾರ ಕೂಡ ಉತ್ಸುಕತೆಯಿಂದ ಇದೆ. ಅದಕ್ಕೆ ಪೂರಕವಾಗಿ ವಿಶೇಷ ಅಧಿಕಾರಿ ಯನ್ನು ನೇಮಿಸಿ, ಮುಂಗಡ ಅನುದಾನವನ್ನು ಬಿಡುಗಡೆ ಮಾಡಿದರೆ ಮಾತ್ರ ಸಮ್ಮೇಳನದ ಪೂರ್ವ ಸಿದ್ಧತೆಯನ್ನು ಆರಂಭಿಸಲು ಸಾಧ್ಯವಾಗುತ್ತದೆ ಎಂದು ಹೇಳಿದ್ದಾರೆ.

ಕನ್ನಡ ನಾಡು, ನುಡಿಯ ಬಗ್ಗೆ ಅಪಾರ ಕಾಳಜಿ ಹೊಂದಿರುವ ಮುಖ್ಯಮಂತ್ತಿ ಬಸವರಾಜ ಬೊಮ್ಮಾಯಿ ಅವರು ಈ ಕುರಿತು ಸಕಾರಾತ್ಮಕವಾಗಿ ಸ್ಪಂದಿಸಬೇಕಾಗಿ ವಿಶ್ವದ, ರಾಷ್ಟ್ರದ, ರಾಜ್ಯದ ಹಾಗೂ ಜಿಲ್ಲೆಯ ಸಮಸ್ತ ಕನ್ನಡಿಗರ ಪರವಾಗಿ ವಾಮದೇವಪ್ಪ ಮನವಿ ಮಾಡಿದ್ದಾರೆ. 

error: Content is protected !!