ದಾವಣಗೆರೆ, ಮಾ. 24 – ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು ಎಂದು ರಾಜ್ಯದ ಬಿಜೆಪಿ ಸರ್ಕಾರ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ. ಇಂದು ಸಂಜೆ ನಡೆದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನೇತೃತ್ವದ ಸಚಿವ ಸಂಪುಟದ ಸಭೆಯಲ್ಲಿ ಈ ಸಂಬಂಧ ತೀರ್ಮಾನ ಮಾಡಿ ನಿರ್ಣಯಿಸಿರುವುದನ್ನು ಬಿಜೆಪಿ ರೈತ ಮೋರ್ಚಾ ರಾಜ್ಯ ಸಂಚಾಲಕ ಹಾಗೂ ಕುರುಬ ಸಮಾಜದ ಹಿರಿಯ ಮುಖಂಡ ಕೊಳೇನಹಳ್ಳಿ ಬಿ.ಎಂ. ಸತೀಶ್ ಸ್ವಾಗತಿಸಿದ್ದಾರೆ. ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ ತೀರಾ ಹಿಂದುಳಿದಿರುವ ಕುರುಬರಿಗೆ ಯುಗಾದಿ ಹಬ್ಬದ ಬೆಲ್ಲ ಕೊಟ್ಟಿರುವ ಬಿಜೆಪಿ ಸರ್ಕಾರ ಸಾಮಾಜಿಕ ನ್ಯಾಯದ ಪರಿಪಾಲನೆ ಮಾಡಿದೆ ಎಂದು ಅವರು ಹೇಳಿದ್ದಾರೆ.
January 11, 2025