ಎಸ್.ಎಸ್.ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಕೇಂದ್ರದ 12ನೇ ವರ್ಷದ ಪದವಿ ಪ್ರದಾನ ಸಮಾರಂಭವು ಇಂದು ಸಂಜೆ 5 ಗಂಟೆಗೆ ಕಾಲೇಜಿನ ಆವರಣದಲ್ಲಿ ನಡೆಯಲಿದೆ.
ಬೆಂಗಳೂರು ನಿಮ್ಹಾನ್ಸ್ ಆಸ್ಪತ್ರೆಯ ಮೂಲ ವಿಜ್ಞಾನದ ರಿಜಿಸ್ಟರ್ ಮತ್ತು ಡೀನ್ ಡಾ. ವಿ. ರವಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಹಿರಿಯ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಅವರು ಗೌರವಾನ್ವಿತ ಅತಿಥಿಯಾಗಿ ಪಾಲ್ಗೊಳ್ಳಲಿದ್ದು, ಮಾಜಿ ಸಚಿವ ಶಾಮನೂರು ಮಲ್ಲಿಕಾರ್ಜುನ್ ಸಮಾರಂಭದ ಅಧ್ಯಕ್ಷತೆ ವಹಿಸುವರು.
ರಾಜೀವ್ ಗಾಂಧಿ ವಿಶ್ವವಿದ್ಯಾನಿಲಯದ ಸೆನೆಟ್ ಸದಸ್ಯ ಡಾ.ರವೀಂದ್ರ ಬಣಕಾರ್ ವಿಶೇಷ ಆಹ್ವಾನಿತರಾಗಿದ್ದು, ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಎಸ್. ಎಸ್. ಪ್ರಸಾದ್ ಉಪಸ್ಥಿತರಿರುವರು.