ಹರಪನಹಳ್ಳಿ : ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಗೆ ಸಕಲ ಸಿದ್ಧತೆ

ಹರಪನಹಳ್ಳಿ : ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಗೆ ಸಕಲ ಸಿದ್ಧತೆ - Janathavaniಹರಪನಹಳ್ಳಿ,ಮಾ.27- ಇದೇ ದಿನಾಂಕ 31ರಿಂದ ಏಪ್ರಿಲ್ 15ರ ವರೆಗೆ ಜರುಗುವ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಗೆ ಹರಪನಹಳ್ಳಿ ತಾಲ್ಲೂಕಿನಲ್ಲಿ ಸಕಲ ಸಿದ್ದತೆಯನ್ನು ಕೈಗೊಂಡಿರುವುದಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಯು.ಬಸವರಾಜಪ್ಪ ತಿಳಿಸಿದ್ದಾರೆ.

ತಾಲ್ಲೂಕಿನಲ್ಲಿ 4328 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, ಅದರಲ್ಲಿ ಬಾಲಕರು 2164, ಬಾಲಕಿಯರು 2164 ಒಟ್ಟು 4328 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ.

ಗ್ರಾಮೀಣ ಭಾಗದಲ್ಲಿ 10, ಪಟ್ಟಣದಲ್ಲಿ 3 ಸೇರಿದಂತೆ ಒಟ್ಟು 13 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸ ಲಾಗಿದೆ. ಪ್ರತಿದಿನ ಒಂದೊಂದು ಕೇಂದ್ರಗಳಿಗೆ 13 ಸ್ಥಾನಿಕ ಜಾಗೃತ ದಳ ಅಧಿಕಾರಿಗಳನ್ನು ಪರೀಕ್ಷಾ ಅವ್ಯವಹಾರಗಳು ನಡೆಯದಂತೆ ನೋಡಿಕೊಳ್ಳಲು ನೇಮಿಸಲಾಗಿದೆ. ಪರೀಕ್ಷೆ ಮುಗಿದ ನಂತರ ಉತ್ತರ ಪತ್ರಿಕೆಗಳನ್ನು ತರಲು ನಾಲ್ಕು ಮಾರ್ಗಗಳನ್ನು ಮ್ಯಾಪಿಂಗ್ ಮಾಡಲಾಗಿದ್ದು, 4 ಜನ ಮಾರ್ಗಾಧಿಕಾರಿಗಳನ್ನು ನೇಮಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್‌ಗಳನ್ನು ಸ್ವಾಧೀನ ಪಡಿಸಿಕೊಳ್ಳಲು 13 ಮೊಬೈಲ್ ಸ್ವಾಧೀನಾಧಿಕಾರಿಗಳನ್ನೂ  ಸಹ ನೇಮಿಸಲಾಗಿದೆ ಎಂದು ತಿಳಿಸಿದ್ದಾರೆ.

error: Content is protected !!