ರಾಣೇಬೆನ್ನೂರು, ಏ.2- ಇಲ್ಲಿನ ಚೋಳ ಮರಡೇಶ್ವರ ನಗರದಲ್ಲಿರುವ ಮಾತಾ ಪಬ್ಲಿಕ್ ಶಾಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಬಿ.ಎಸ್. ಜಗದೀಶ್ವರ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಹೆಚ್. ಪಾಟೀಲ್ ನೇತೃತ್ವದಲ್ಲಿ ತಾಲ್ಲೂಕಿನ ಎಲ್ಲಾ ಅನುದಾನ ರಹಿತ ಪ್ರಾಥಮಿಕ, ಪ್ರೌಢಶಾಲೆಗಳ ಮುಖ್ಯ ಶಿಕ್ಷಕರ ಸಭೆಯನ್ನು ನಡೆಸಲಾಯಿತು.
ಆರ್ಟಿಇ ಅಡಿಯಲ್ಲಿ ದಾಖಲಾದ ಮಕ್ಕಳ ಸಮಸ್ಯೆ ಹಾಗೂ ಮಾರಾಟ ಪಠ್ಯ ಪುಸ್ತಕಗಳನ್ನು ಆದಷ್ಟು ಬೇಗ ಶಾಲೆಗಳಿಗೆ ವಿತರಿಸಲು ಅಧಿಕಾರಿ ಗಳು ಸೂಚಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಹೆಚ್. ಪಾಟೀಲ್ ಅವರು, ಖಾಸಗಿ ಶಾಲೆಗಳ ಹಲವಾರು ತಾಂತ್ರಿಕ ಸಮಸ್ಯೆಗಳನ್ನು ವಿವರಿಸಿದರು. ಸಭೆಯಲ್ಲಿ ಆರ್ಟಿಇ ನೋಡಲ್ ಅಧಿಕಾರಿ ಡಿ. ಸುನೀತ, ಮುಖ್ಯಸ್ಥರಾದ ಎಸ್. ಚನ್ನಬಸಪ್ಪ ಮತ್ತು ಇತರರು ಉಪಸ್ಥಿತರಿದ್ದರು. ಇದೇ ವೇಳೆ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಬಿ.ಎಸ್. ಜಗದೀಶ್ ಅವರನ್ನು ಸನ್ಮಾನಿಸಲಾಯಿತು.