ದಾವಣಗೆರೆ, ಏ.3- ಚುನಾವಣಾ ಆಯೋಗವು ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023ರ ವೇಳಾಪಟ್ಟಿಯನ್ನು ಈಗಾಗಲೇ ಹೊರಡಿಸಿದ್ದು, ಜಿಲ್ಲೆಯ ಎಲ್ಲಾ ಮತದಾರರು, ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಬಗ್ಗೆ ಪರಿಶೀಲನೆ ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ಚುನಾವಣಾ ಅಧಿಕಾರಿ ಪಿ.ಎನ್. ಲೋಕೇಶ್ ತಿಳಿಸಿದ್ದಾರೆ.
ವೋಟರ್ ಹೆಲ್ಪ್ಲೈನ್ ಆಪ್ ಡೌನ್ಲೋಡ್ ಮಾಡಿ ಮೊಬೈಲ್ ಸಂಖ್ಯೆಯೊಂದಿಗೆ ಲಾಗಿನ್ ಮಾಡಿ, ಓಟಿಪಿ ನಮೂದಿಸುವ ಮೂಲಕ ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಬಗ್ಗೆ ಖಚಿತಪಡಿಸಿಕೊಳ್ಳಬಹು ದಾಗಿದೆ ಅಥವಾ _1950 ಟೋಲ್ ಫ್ರೀ ನಂಬರ್ ಕರೆಮಾಡಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.