ಬಿಸಿಲಿನಿಂದಾಗುವ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರು ಕಾಳಜಿ ವಹಿಸಬೇಕು

ಬಿಸಿಲಿನಿಂದಾಗುವ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರು ಕಾಳಜಿ ವಹಿಸಬೇಕು - Janathavaniಚಳ್ಳಕೆರೆ, ಏ. 4- ಬೇಸಿಗೆಯಲ್ಲಿ ಬಿಸಿಲಿನ ತಾಪವು ಹೆಚ್ಚಾಗಿರುವುದರಿಂದ ಆರೋಗ್ಯದ ಮೇಲೆ ಬೀರುವ ದುಷ್ಪರಿಣಾಮಗಳ ಹಾಗೂ ಅವುಗಳ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಾರ್ವಜನಿಕರು ಕಾಳಜಿ ವಹಿಸಬೇಕು ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಎನ್. ಕಾಶಿ  ತಿಳಿಸಿದ್ದಾರೆ.

ಇಲ್ಲಿನ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿಯಲ್ಲಿ ನಿನ್ನೆ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಬೇಸಿಗೆಯಲ್ಲಿ ಕಲುಷಿತ ನೀರಿನ ಸೇವನೆಯಿಂದ ಸಂಭಾವ್ಯ ವಾಂತಿ-ಬೇಧಿ ಪ್ರಕರಣಗಳು ಉಂಟಾಗುವ ಹಿನ್ನಲೆಯಲ್ಲಿ ಶುದ್ದೀಕರಿಸಿದ ಅಥವಾ ನೀರು ಶುದ್ದೀಕರಣ ಘಟಕದ ನೀರನ್ನು ಕುಡಿಯಲು ಬಳಸಿ, ಕೈಗಳನ್ನು ಸಾಬೂನು ಮತ್ತು ನೀರಿನಿಂದ ಸ್ವಚ್ಛಗೊಳಿಸಿ ಎಂದು ಅವರು ಹೇಳಿದರು.

ಚಳ್ಳಕೆರೆ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ ಮತ್ತು ಸಮುದಾಯ ಆರೋಗ್ಯ ಕೇಂದ್ರ ಮತ್ತು ಪಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಬೇಸಿಗೆಯಲ್ಲಿ ಬರಬಹುದಾದ ರೋಗಗಳ ಆರೈಕೆಗಾಗಿ, ಓಆರ್‌ಎಸ್, ಐವಿ ಮತ್ತು ಜೀವರಕ್ಷಕ ಔಷಧಗಳ ದಾಸ್ತಾನು ಇಟ್ಟುಕೊಳ್ಳುವಂತೆ ಹಾಗೂ ಆರೋಗ್ಯ ನಿರೀಕ್ಷಣಾಧಿಕಾರಿಗಳು ನೀರಿನ ಗುಣಮಟ್ಟದ ಪರೀಕ್ಷೆಯನ್ನು ನಿಯಮಿತವಾಗಿ ಮಾಡುವಂತೆ ಅವರು ಸೂಚನೆ ನೀಡಿದ್ದಾರೆ.

error: Content is protected !!