ಒಳ ಮೀಸಲಾತಿ ಶಿಫಾರಸ್ಸು ವಿರೋಧಿಸಿ ಪ್ರತಿಭಟನೆ

ದಾವಣಗೆರೆ, ಏ.7- ಪರಿಶಿಷ್ಟ ಜಾತಿಗಳನ್ನು ನಾಲ್ಕು ಗುಂಪುಗಳಾಗಿ ವರ್ಗೀಕರಿಸಿ ಒಳಮೀಸಲಾತಿ ಹಂಚಿಕೆ ಮಾಡಿ, ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿರುವುದನ್ನು ಖಂಡಿಸಿ, ಇದೇ ದಿನಾಂಕ 10 ರ ಸೋಮವಾರ ಬೆಳಗ್ಗೆ 10 ಗಂಟೆಗೆ ನಗರದ ಅಂಬೇಡ್ಕರ್‌ ವೃತ್ತದಿಂದ ಉಪವಿಭಾಗಾಧಿಕಾರಿ ಕಚೇರಿಯವರೆಗೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಮೀಸಲಾತಿ ಸಂರಕ್ಷಣಾ ಒಕ್ಕೂಟದ ಮುಖಂಡ ಚಿನ್ನಸಮುದ್ರ ಶೇಖರ್‌ ನಾಯ್ಕ್‌ ಹೇಳಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಮಾರ್ಚ್‌ 25 ರಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ವರ್ಗಿಕರಣ ಹಂಚಿಕೆ ನಿರ್ಣಯ ಮಾಡಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ಮುಂದಾಗಿರುವ ನಿರ್ಧಾರ ಖಂಡಿಸಿದರು.

ನ್ಯಾ.ಸದಾಶಿವ ಆಯೋಗದ ವರದಿಯನ್ನು ಒಪ್ಪಿರುವುದಿಲ್ಲ ಎನ್ನುತ್ತಲೇ ವರದಿ ಆಧರಿಸಿ ಪರಿಶಿಷ್ಟ ಜಾತಿಯ ಸಮುದಾಯಗಳನ್ನು 4 ಗುಂಪುಗಳಾಗಿ ವಿಭಜಿಸಿ, ಒಳ ಮೀಸಲಾತಿ ಹಂಚಿಕೆ ಮಾಡಿರುವುದು ನ್ಯಾಯ ಸಮ್ಮತವಾಗಿಲ್ಲ. ಹಾಗಾಗಿ ನಾಡಿನ ಬಂಜಾರ, ಭೋವಿ, ಕೊರಮ, ಕೊರಚ ಮತ್ತಿತರೆ ಸಮುದಾಯದ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಹೋರಾಟ ಕೈಗೊಂಡಿವೆ ಎಂದರು.

ಸುದ್ದಿಗೋಷ್ಠಿಯಲ್ಲಿ ಸಮಾಜದ ಮುಖಂಡರಾದ ನಂಜಾನಾಯ್ಕ್‌, ಲಿಂಗರಾಜ್‌ ನಾಯ್ಕ್‌, ಕೊಟ್ರೇಶ್‌ ನಾಯ್ಕ್‌, ದ್ಯಾಮ ನಾಯ್ಕ್‌ ಚೌವ್ಹಾಣ್‌, ರಾಜನಾಯ್ಕ್‌, ಮಂಜಾನಾಯ್ಕ್‌, ಗೋಪಿನಾಯ್ಕ್‌, ಲಕ್ಷ್ಮಣ ರಾಮಾವತ್‌, ಭೀಮನಾಯ್ಕ್‌ ಮತ್ತಿತರರಿದ್ದರು.

error: Content is protected !!