ಹೊನ್ನಾಳಿ, ಏ.7- ಇದೇ ದಿನಾಂಕ 17 ರಂದು ಸಾಂಕೇತಿಕವಾಗಿ ಮತ್ತು 20 ರಂದು ಅಧಿಕೃತವಾಗಿ ತಾವು ನಾಮಪತ್ರ ಸಲ್ಲಿಸುವುದಾಗಿ ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದರು.
ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಇಂದು ಚುನಾವಣಾ ಪ್ರಚಾರ ನಡೆಸಿದ ಸಂದರ್ಭದಲ್ಲಿ ಅವರು ಮಾತನಾಡಿದರು.
ಅಭಿವೃದ್ದಿಯೊಂದೇ ನನ್ನ ಮೂಲಮಂತ್ರವಾಗಿದ್ದು, ಪ್ರತಿಯೊಂದು ಗ್ರಾಮದಲ್ಲಿ ಮಾಡಿರುವ ಅಭಿವೃದ್ದಿ ಕೆಲಸಗಳ ಆಧಾರದ ಮೇಲೆ ನಾನು ಮತ ಕೇಳುತ್ತಿದ್ದೇನೆ ಎಂದ ಶಾಸಕರು, ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನ ಜನರ ನಾಡಿಮಿಡಿತ ನನಗೆ ಗೊತ್ತಿದ್ದು, ಈ ಬಾರಿ ಅತ್ಯಧಿಕ ಮತಗಳ ಅಂತರದಿಂದ ಗೆಲ್ಲುತ್ತೇನೆಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ತಾಲ್ಲೂಕು ಮಂಡಲದ ಅಧ್ಯಕ್ಷ ಜೆ.ಕೆ.ಸುರೇಶ್, ಜಿಲ್ಲಾ ಉಪಾಧ್ಯಕ್ಷ ನೆಲಹೊನ್ನೆ ಮಂಜುನಾಥ್, ಮುಖಂಡರಾದ ಅರಕೆರೆ ನಾಗರಾಜ್, ಬಂಜಾರ ನಿಗಮದ ನಿರ್ದೇಶಕ ಮಾರುತಿ ನಾಯ್ಕ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.