ಕೇಂದ್ರದ ಬಿಜೆಪಿ ಸರ್ಕಾರ ಪ್ರಶ್ನಿಸಿದವರನ್ನು ದಮನ ಮಾಡುವ ಪ್ರವೃತ್ತಿಯನ್ನು ಮುಂದುವರೆಸಿದ್ದು, 142 ಸಂಸದರನ್ನು ಅಮಾನತ್ತು ಮಾಡಲಾಗಿದ್ದು, ಇಂತಹ ಪ್ರಜಾಪ್ರಭುತ್ವ ವಿರೋಧಿ ನಡೆ ಅನುಸರಿಸುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ನಿಂದ ಇಂದು ನಗರದಲ್ಲಿ ಪ್ರತಿಭಟನೆ ನಡೆಯಲಿದೆ.
ಬೆಳಿಗ್ಗೆ 11.30 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಬಿ. ಮಂಜಪ್ಪ ಅಧ್ಯಕ್ಷತೆಯಲ್ಲಿ ಜಯದೇವ ವೃತ್ತದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ. ದಿನೇಶ್ ಶೆಟ್ಟಿ ತಿಳಿಸಿದ್ದಾರೆ.