ದಾವಣಗೆರೆ, ಡಿ. 29 – ಭಾರತ ಚುನಾವಣಾ ಆಯೋಗವು ಭಾವ ಚಿತ್ರವಿರುವ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣಾ ವೇಳಾಪಟ್ಟಿ ಪರಿಷ್ಕರಿಸಿದ್ದು ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಬರುವ ಜನವರಿ 12ರ ವರೆಗೆ ಅವಕಾಶ ಕಲ್ಪಿಸಲಾಗಿದೆ.
ತಿದ್ದುಪಡಿ ಮತದಾರರ ಪಟ್ಟಿಯನ್ನು ಜನವರಿ 17 ರಂದು ಪ್ರಕಟಿಸಿ ಅಂತಿಮ ಮತದಾರರ ಪಟ್ಟಿಯನ್ನು ಜನವರಿ 22 ರಂದು ಪ್ರಕಟಿಸಲಾಗುತ್ತದೆ. ಮತದಾರರು ಭಾವಚಿತ್ರವಿರುವ ಮತದಾರರ ಪಟ್ಟಿಯಲ್ಲಿನ ಪರಿಷ್ಕರಣೆಗೆ ಸಂಬಂಧಿಸಿದ ತಿದ್ದುಪಡಿ, ಸೇರ್ಪಡೆ, ವರ್ಗಾವಣೆಗೆ ಸಂಬಂಧಿಸಿದಂತೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ತಿಳಿಸಿದ್ದಾರೆ.