ದಾವಣಗೆರೆ, ಡಿ.29- ಕ್ಷೇತ್ರ ಬದು ನಿರ್ಮಾಣ, ನೀರು ಸಂಗ್ರಹಣಾ ರಚನೆ (ಕೃಷಿ ಹೊಂಡ), ನೀರು ಇಂಗದಂತೆ ತಡೆಯಲು ಪಾಲಿಥಿನ್ ಹೊದಿಕೆ, ಕೃಷಿ ಹೊಂಡದ ಸುತ್ತಲೂ ತಂತಿ ಬೇಲಿ, ಹೊಂಡದಿಂದ ನೀರು ಎತ್ತಲು ಡೀಸೆಲ್/ಸೋಲಾರ್ ಪಂಪ್ ಸೆಟ್ ಮತ್ತು ನೀರನ್ನು ಬೆಳೆಗೆ ಹಾಯಿಸಲು ಸೂಕ್ಷ್ಮ (ತುಂತುರು/ಹನಿ) ನೀರಾವರಿ ಘಟಕಗಳಿಗೆ ಕೃಷಿ ಇಲಾಖೆಯಿಂದ ಕೃಷಿ ಭಾಗ್ಯ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ.
ಕೃಷಿ ಭಾಗ್ಯ ಪ್ಯಾಕೇಜ್ನಲ್ಲಿ ಒಟ್ಟಾರೆ 6 ಕಡ್ಡಾಯ ಘಟಕಗಳನ್ನು ಒಳಗೊಂಡಿದ್ದು ಎಲ್ಲಾ ಘಟಕಗಳನ್ನು ಫಲಾನುಭವಿ ರೈತರು ಯೋಜನೆಯ ಸಮಗ್ರ ಸದುಪಯೋಗ ಪಡೆಯಲು ತಪ್ಪದೇ ಅಳವಡಿಸುವುದು ಕಡ್ಡಾಯವಾಗಿರುತ್ತದೆ.
ರೈತರು ಸದರಿ ಸೌಲಭ್ಯಗಳನ್ನು ಪಡೆಯಲು ಕೂಡಲೇ ಸಂಬಂಧಿಸಿದ ಹೋಬಳಿಯ ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸಲು ಸಹಾಯಕ ಕೃಷಿ ನಿರ್ದೇಶಕ ಶ್ರೀಧರಮೂರ್ತಿ ಡಿ.ಎಂ. ತಿಳಿಸಿದ್ದಾರೆ.