ದಾವಣಗೆರೆ, ಡಿ. 29- ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ನಾಳೆ ದಿನಾಂಕ 30 ರ ಶನಿವಾರ ಬೆಳಿಗ್ಗೆ 11.30 ಕ್ಕೆ ನಗರದ ಡಿಡಿಪಿಐ ಕಚೇರಿ ಸಮೀಪದ ಮುಸ್ಲಿಂ ಹಾಸ್ಟೆಲ್ನ ವಾಣಿಜ್ಯ ಸಂಕೀರ್ಣದ ಮಳಿಗೆಯಲ್ಲಿ ಮತದಾರರ ಸಂಪರ್ಕ ಕಚೇರಿಯನ್ನು ಉದ್ಘಾಟಿಸಲಾಗುವುದು ಎಂದು ಪಕ್ಷೇತರ ಅಭ್ಯರ್ಥಿ ಎನ್.ಇ. ನಟರಾಜ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ನಿಕಟಪೂರ್ವ ರಾಜ್ಯಾಧ್ಯಕ್ಷ ಮಹಾದೇವಯ್ಯ ಮಠಪತಿ ಕಚೇರಿ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಡಾ. ಸುಧೀರ್ ರಾಯಸಮ್ ಆಗಮಿಸಲಿದ್ದಾರೆ.
ಕಾರ್ಯಕ್ರಮದ ನಂತರ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ನಡೆಸಲಾಗುವುದು ಎಂದು ಮಾಹಿತಿ ನೀಡಿದರು.
ಜೂನ್- 2024 ರಂದು ನಡೆಯುವ ಆಗ್ನೇಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿರುವ ನಾನು, ಶಿಕ್ಷಕರು, ಉಪನ್ಯಾಸಕರ ಸಮಸ್ಯೆಗಳನ್ನು ಬಗೆಹರಿಸುವ ಪ್ರಯತ್ನಮಾಡುತ್ತೇನೆ ಎಂದರು.ಟಿ.ಎಸ್. ನಾಗರಾಜ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.