ದಾವಣಗೆರೆ, ಜ.9- ಕಳೆದ ಡಿಸೆಂಬರ್ ತಿಂಗಳು ಜಿಲ್ಲೆಯಲ್ಲಿ ನಡೆದ ಅಕ್ರಮ ಚಟುವಟಿಕೆಗಳಿಗೆ ಸಂಬಂಧಿಸಿದಂತೆ 56 ಪ್ರಕರಣಗಳನ್ನು ದಾಖಲಿಸಿ, 5.32 ಲಕ್ಷ ರೂ. ಮೌಲ್ಯದ ನಗದು ಸೇರಿದಂತೆ ಸ್ವತ್ತು ವಶಪಡಿಸಿಕೊಂಡಿದ್ದು, 156 ಜನ ಆರೋಪಿತರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಮತಿ ಉಮಾ ಪ್ರಶಾಂತ್ ತಿಳಿಸಿದ್ದಾರೆ. ಮಟ್ಕಾ ಜೂಜಾಟಕ್ಕೆ ಸಂಬಂಧಿಸಿದಂತೆ 22 ಪ್ರಕರಣಗಳು ದಾಖಲಾಗಿದ್ದು, 75350 ರೂ. ವಶಪಡಿಸಿಕೊಂಡು 37 ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
18 ಇಸ್ಪೀಟ್ ಜೂಜಾಟ ಪ್ರಕರಣಕ್ಕೆ ಸಂಬಂಧಿಸಿಂತೆ 104 ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿ, 412480 ರೂ. ವಶಪಡಿಸಿಕೊಳ್ಳಲಾಗಿದೆ. 1 ಬೆಟ್ಟಿಂಗ್ ಜೂಜಾಟ ಪ್ರಕರಣದಲ್ಲಿ 1040 ರೂ. ವಶಪಡಿಸಿ ಕೊಂಡು ಇಬ್ಬರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.
12 ಅಕ್ರಮ ಮದ್ಯ ಮಾರಾಟ ಪ್ರಕರಣಗಳು ದಾಖಲಾಗಿದ್ದು, 10274 ರೂ. ಮೌಲ್ಯದ ಅಕ್ರಮ ಮದ್ಯ ವಶಪಡಿಸಿಕೊಂಡು 12 ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅಕ್ರಮ ಮರಳು ಸಾಗಾಟಕ್ಕೆ ಸಂಬಂಧಿಸಿದಂತೆ 3 ಪ್ರಕರಣಗಳಲ್ಲಿ ಓರ್ವ ಆರೋಪಿ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. 33 ಸಾವಿರ ರೂ.ಮೌಲ್ಯದ 24 ಟನ್ ಮರಳು ವಶಪಡಿಸಿಕೊಳ್ಳಲಾಗಿದೆ.