ದಾವಣಗೆರೆ, ಜ. 14 – ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿ ಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಶುಲ್ಕ ವಿನಾಯಿತಿ ಮತ್ತು ವಿದ್ಯಾಸಿರಿ- ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ ಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಇದೇ ದಿನಾಂಕ 15 ರವರೆಗೆ ವಿಸ್ತರಿಸಲಾಗಿದೆ ಎಂದು ಹಿಂದುಳಿದ ವರ್ಗ ಗಳ ಕಲ್ಯಾಣ ಅಧಿಕಾರಿ ಕೆ.ಹೆಚ್. ಗಾಯತ್ರಿ ತಿಳಿಸಿದ್ದಾರೆ.
July 23, 2024