ಮಲೇಬೆನ್ನೂರು : ಇಂದು ಆಂಜನೇಯ ಸ್ವಾಮಿ ರಥ, ಸಾಮೂಹಿಕ ವಿವಾಹ

ಮಲೇಬೆನ್ನೂರು : ಬಸವ ಜಯಂತಿ ಅಂಗವಾಗಿ ಇಂದು ಸ್ಥಳೀಯ ಆಂಜನೇಯ ಸ್ವಾಮಿ ರಥೋತ್ಸವ ಹಾಗೂ 18ನೇ ವರ್ಷದ ಸಾಮೂಹಿಕ ವಿವಾಹ ಕಾರ್ಯಕ್ರಮ ಏರ್ಪಡಿಸಲಾಗಿದೆ.

ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗಿದ್ದು, ಗಣಪತಿ ಪೂಜೆ, ಕಂಕಣ ಧಾರಣೆ, ಮನರಂಜನಾ ಕಾರ್ಯಕ್ರಮ ಜರುಗಲಿದೆ.

ಇಂದು ಸಾಮೂಹಿಕ ವಿವಾಹ ಸಮಾರಂಭದಲ್ಲಿ ರಟ್ಟಿಹಳ್ಳಿ ಕಬ್ಬಿಣಕಂಥಿ ಮಠದ ಶ್ರೀ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ, ಚಿತ್ರದುರ್ಗ ಕುಂಬಾರ ಪೀಠದ ಬಸವಮೂರ್ತಿ ಕುಂಬಾರ ಗುಂಡಯ್ಯ ಸ್ವಾಮೀಜಿ ದಿವ್ಯಸಾನ್ನಿಧ್ಯ ವಹಿಸುವರು.

ಜಿ.ಎಂ. ಸಿದ್ದೇಶ್ವರ, ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಶಾಸಕ ಬಿ.ಪಿ. ಹರೀಶ್, ಮಾಜಿ ಶಾಸಕಾರದ ಶಿವಶಂಕರ್, ರಾಮಪ್ಪ ಮತ್ತಿತರರು ಭಾಗವಹಿಸುವರು.

error: Content is protected !!