ದಾವಣಗೆರೆ ನ. 10 – ರಾಷ್ಟ್ರೀಯ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ, 2025-26 ನೇ ಸಾಲಿನಲ್ಲಿ ಜಿಲ್ಲೆಯ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕಿನ ಗ್ರಾಮ ಪಂಚಾಯಿತಿಯಲ್ಲಿ ಹೊಸದಾಗಿ ತೋಟಗಾರಿಕೆ ಬೆಳೆ ಬೆಳೆಯುವ ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ರೈತರು ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಅಥವಾ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೆೀರಿ, ಹೊನ್ನಾಳಿ ಅಥವಾ ಹೋಬಳಿ ಮಟ್ಟದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಲು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.
December 23, 2024