ದಾವಣಗೆರೆ ತಾಲ್ಲೂಕು ಹಿರೇತೊಗಲೇರಿ ಗ್ರಾಮದಲ್ಲಿ ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಶ್ರೀ ಮಹೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಅತ್ಯಂತ ಶ್ರದ್ಧಾ ಭಕ್ತಿಯಿಂದ ನೆರವೇರಲಿದೆ.
ಇಂದು ಬೆಳಿಗ್ಗೆ ಸೂರ್ಯೋದಯಕ್ಕಿಂತ ಮುಂಚೆ ದೇವರ ಪ್ರತಿಷ್ಠಾಪನೆ ಆಗಲಿದೆ. ನಾಳೆ ಬುಧವಾರ ಸಂಜೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆಯ ಮೂಲಕ
ಶ್ರೀ ಬಸವೇಶ್ವರ ಸ್ವಾಮಿಯನ್ನು ಗುಡಿದುಂಬಿಸಿಕೊಳ್ಳಲಾಗುವುದು ಎಂದು ದೇವಸ್ಥಾನ ಸಮಿತಿ ತಿಳಿಸಿದೆ.