ದಾವಣಗೆರೆ : ನಗರದ ಆರ್.ಎಲ್. ಕಾನೂನು ಕಾಲೇಜಿನಲ್ಲಿ ಶನಿವಾರ ಬೆಳಿಗ್ಗೆ 10 ಗಂಟೆಗೆ ರಾಷ್ಟ್ರೀಯ ಗ್ರಾಹಕರ ದಿನ 2024-25ರ ಅಂಗವಾಗಿ ಕಾಲೇಜಿನ ಸಭಾಂಗಣದಲ್ಲಿ ಕಾರ್ಯ ಕ್ರಮ ಆಯೋಜಿಸಲಾಗಿದೆ. ತುಮಕೂರು ಜಿಲ್ಲೆಯ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷೆ ಜಿ.ಟಿ. ವಿಜಯಲಕ್ಷ್ಮಿ ಕಾರ್ಯಕ್ರಮ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ದಾವಣಗೆರೆ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಎಚ್. ಅರುಣಕುಮಾರ್ ಆಗಮಿಸಲಿದ್ದಾರೆ. ಅಧ್ಯಕ್ಷತೆಯನ್ನು ಆರ್.ಎಲ್. ಕಾನೂನು ಕಾಲೇಜಿನ ಪ್ರಾಚಾರ್ಯ ಡಾ.ಜಿ.ಎಸ್. ಯತೀಶ್ ವಹಿಸಲಿದ್ದಾರೆ. ಕಾರ್ಯಕ್ರಮ ಸಂಯೋಜಕರಾಗಿ ಆರ್.ಎಲ್. ಕಾನೂನು ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಟಿ. ವಿದ್ಯಾಧರ ವೇದವರ್ಮ, ಡಾ.ಟಿ.ಸಿ. ಪಂಕಜಾ ಕಾರ್ಯ ನಿರ್ವಹಿಸಲಿದ್ದಾರೆ.
February 5, 2025