ಇಂದು ಮೈತ್ರಿವನದಲ್ಲಿ ಅಧ್ಯಯನ ಶಿಬಿರ

ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಮೈಸೂರು, ಶರಣ ಸಾಹಿತ್ಯ ಪರಿಷತ್ತು ದಾವಣಗೆರೆ ತಾಲ್ಲೂಕು ಘಟಕದ ವತಿಯಿಂದ ಇಂದು ಬೆಳಿಗ್ಗೆ 10 ಗಂಟೆಯಿಂದ ಹರಿಹರ ಬೈಪಾಸ್ ಹತ್ತಿರದ ಮೈತ್ರಿ ವನದ ಪ್ರೊ. ಬಿ. ಕೃಷ್ಣಪ್ಪ ಸ್ಮಾರಕ ಸಭಾಂಗಣದಲ್ಲಿ `ಲಿಂಗಾಯತ  ಧರ್ಮದ ಇತಿಹಾಸ, ಸಿದ್ಧಾಂತ ಹಾಗೂ ಸಂಘಟನೆ’ ಕುರಿತ ಅಧ್ಯಯನ ಶಿಬಿರ ಹಮ್ಮಿಕೊಳ್ಳಲಾಗಿದೆ.

ಸಾಣೇಹಳ್ಳಿ ಡಾ. ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಶರಣ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಎಸ್.ಬಿ. ರುದ್ರಗೌಡ ಗೋಪನಾಳ್ ಅಧ್ಯಕ್ಷತೆ ವಹಿಸಲಿದ್ದಾರೆ.

ವಿಜಯಪುರದ ಶರಣ ಚಿಂತಕ ಡಾ.ಜೆ.ಎಸ್. ಪಾಟೀಲ್ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಾಗತಿಕ ಲಿಂಗಾಯತ ಮಹಾಸಭಾದ ರಾಜ್ಯ ಕಾರ್ಯದರ್ಶಿ ಮಹಾಂತೇಶ್ ಅಗಡಿ, ಜಿಲ್ಲಾಧ್ಯಕ್ಷ ಆವರಗೆರೆ ರುದ್ರಮುನಿ, ಮಾನವ ಬಂಧುತ್ವ ವೇದಿಕೆ ಜಿಲ್ಲಾ ಸಂಚಾಲಕ ಲಕ್ಷ್ಮಣ್ ರಾಮವತ್, ಶರಣ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಕೆ.ಬಿ. ಪರಮೇಶ್ವರಪ್ಪ, ಜಾಗತಿಕ ಲಿಂಗಾಯತ ಮಹಾಸಭಾದ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಕುಸಮಾ ಲೋಕೇಶ್, ಶಸಾಪ ಪ್ರಧಾನ ಕಾರ್ಯದರ್ಶಿ ಬಿ.ಎಂ. ವಿಶ್ವೇಶ್ವರಯ್ಯ ಮತ್ತಿತರರು ಭಾಗವಹಿಸಲಿದ್ದಾರೆ. 

error: Content is protected !!