ದಾವಣಗೆರೆ, ಫೆ.16- ಅಕ್ರಮ ಮರಳು ಸಾಗಾಣಿಕೆಯನ್ನು ತಡೆಗಟ್ಟಲು ತಾಲ್ಲೂಕಿನ ವಿವಿಧ ಇಲಾಖೆಗಳನ್ನು ಒಳಗೊಂಡಂತೆ ಅಧಿಕಾರಿಗಳ ಹಾಗೂ ಸಿಬ್ಬಂದಿಗಳ ತಂಡವನ್ನು ರಚಿಸಿ, ಅಕ್ರಮ ಮರಳು ಸಾಗಾಣಿಕೆಯನ್ನು ತಡೆಗಟ್ಟಲು ಹಗಲು ಮತ್ತು ರಾತ್ರಿ ಪಾಳೆಯದಲ್ಲಿ ಕರ್ತವ್ಯ ನಿರ್ವಹಿಸುವರು. ಸಾರ್ವಜನಿಕರಿಂದ ಮಾಹಿತಿ ಪಡೆಯಲು ಸಹಾಯವಾಣಿ ಕೇಂದ್ರ ತೆರೆಯಲಾಗಿದೆ.
ಅಕ್ರಮ ಮರಳು ಸಾಗಾಣಿಕೆ ಸಂಬಂಧ ಸಾರ್ವಜನಿಕರು ಯಾವುದೇ ದೂರುಗಳು ಅಥವಾ ಮಾಹಿತಿಯನ್ನು ದೂ.ಸಂ 08192-240751 ಸಹಾಯವಾಣಿಗೆ ದಿನ 24 ಗಂಟೆ ಅವಧಿಯಲ್ಲಿ ಕರೆ ಮಾಡಬಹುದಾಗಿದೆ ಎಂದು ಹರಿಹರ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.