ದಾವಣಗೆರೆ, ಫೆ.16- ಇಂಧನ ಸಚಿವರು ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಅವರು ನಾಡಿದ್ದು ದಿನಾಂಕ 18 ರ ಮಂಗಳವಾರ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ದಿನಾಂಕ 18ರ ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಗೆ ಭೇಟಿ ನೀಡುವರು. ನಂತರ 11 ಗಂಟೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿರುವ ಇಂಧನ ಇಲಾಖೆಯ ವಿಷಯಗಳ ಕುರಿತು ಚರ್ಚಿಸಲು ಜಿಲ್ಲೆಯ ಎಲ್ಲಾ ಚುನಾಯಿತ ಜನ ಪ್ರತಿನಿಧಿಗಳೊಂದಿಗೆ ಸಭೆ ನಡೆಸುವರು.