ದಾವಣಗೆರೆ, ಮಾ.18- ಮೆಟ್ರಿಕ್ ನಂತರದ ಕೋರ್ಸ್ ಗಳಾದ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ, ವೃತ್ತಿಪರ ಸ್ನಾತಕೋತ್ತರ ಪದವಿಗಳ ಕೆಲ ಕೋರ್ಸುಗಳಿಗೆ ಕೌನ್ಸೆಲಿಂಗ್ ತಡವಾಗಿ ಪ್ರಾರಂಭವಾಗಿರುತ್ತದೆ. ಮತ್ತು ಹಿಂದಿನ ಶೈಕ್ಷಣಿಕ ವರ್ಷದ ಫಲಿತಾಂಶ ತಡವಾಗಿ ನೀಡಿದ ಕಾರಣ ಇಲಾಖೆಯಿಂದ ನಿಗಧಿಪಡಿಸಿದ ಅವಧಿಯೊಳಗೆ ಅರ್ಜಿ ಸಲ್ಲಿಸಲು ಸಾಧ್ಯವಾಗಿರುವುದಿಲ್ಲ.
ಈ ಕೋರ್ಸುಗಳಿಗೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ, ಶುಲ್ಕ ಮರುಪಾವತಿ ಸೌಲಭ್ಯಕ್ಕಾಗಿ ಆನ್ ಲೈನ್
ಮೂಲಕ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಕೆ ಅವಧಿಯನ್ನು ಇದೇ ದಿನಾಂಕ 30 ರವರೆಗೆ ವಿಸ್ತರಿಸಲಾಗಿದೆ ಎಂದು ಇಲಾಖೆಯ ಅಧಿಕಾರಿ ಗಾಯತ್ರಿ ತಿಳಿಸಿದ್ದಾರೆ.