ಎಐಡಿಎಸ್‍ಓ ನೇತೃತ್ವದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ
ದಾವಣಗೆರೆ, ಜ.22- ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳ ಅನೇಕ ಸಮಸ್ಯೆಗಳನ್ನು ಪರಿಹರಿಸಲು ಆಗ್ರಹಿಸಿ ಎಐಡಿಎಸ್‍ಓ ನೇತೃತ್ವದಲ್ಲಿ ವಿದ್ಯಾರ್ಥಿಗಳು ಇಂದು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಸರ್ಕಾರಿ ಕಾಲೇಜಿನಿಂದ ಪ್ರತಿಭಟನಾ ಮೆರವಣಿಗೆ ಮೂಲಕ ಉಪ ವಿಭಾಗಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು. ರಾಜ್ಯ ಸರ್ಕಾರವು ಪ್ರಸಕ್ತ ಶೈಕ್ಷಣಿಕ ವರ್ಷ ದಲ್ಲಿ ಇನ್ನೂ ಹಾಸ್ಟೆಲ್ ಹಾಗೂ ವಿದ್ಯಾರ್ಥಿ ವೇತನಗಳಿಗೆ ಅರ್ಜಿಯನ್ನು ಆಹ್ವಾನಿಸಿಲ್ಲ. ರಾಜ್ಯದ ಹಲವು ಕಡೆ ನಗರ ಹಾಗೂ ಗ್ರಾಮೀಣ ಭಾಗದ ವಿದ್ಯಾ ರ್ಥಿಗಳು ಬಸ್ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ.
ಕಾಲೇಜುಗಳು ಪ್ರಾರಂಭವಾಗಿ ವಿದ್ಯಾರ್ಥಿ ಗಳು ಕಾಲೇಜುಗಳಿಗೆ ಮರಳುತ್ತಿದ್ದು, ಕಾಲೇಜು ಗಳಲ್ಲಿ ಪಾಠಗಳು ಇನ್ನೂ ಪ್ರಾರಂಭವಾಗುತ್ತಿಲ್ಲ. ಅವಶ್ಯಕ ಬೋಧಕರಿಲ್ಲದೇ ವಿದ್ಯಾರ್ಥಿಗಳು ಪಾಠಗಳಿಂದ ವಂಚಿತರಾಗುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ವಿದ್ಯಾರ್ಥಿ ವೇತನಗಳನ್ನು ಕೂಡಲೇ ಬಿಡುಗಡೆ ಮಾಡಬೇಕು. ಎಲ್ಲಾ ಸರ್ಕಾರಿ ಹಾಸ್ಟೆಲ್ ಗಳಿಗೆ ಕೂಡಲೇ ಅರ್ಜಿ ಆಹ್ವಾನಿಸಿ ಪ್ರವೇಶಾತಿ ನೀಡಿ ಮತ್ತು ಹಾಸ್ಟೆಲ್ ಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸ ಬೇಕು. ನಗರ ಮತ್ತು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್ ಸೌಲಭ್ಯ ಒದಗಿಸ ಬೇಕು. ಹೆಚ್ಚು ವರಿ ಶುಲ್ಕ ಪಡೆಯು ವುದನ್ನು ನಿಲ್ಲಿಸಬೇಕು. ಕಾಲೇಜುಗಳಲ್ಲಿ ಅವಶ್ಯಕ ಬೋಧ ಕರನ್ನು ನೇಮಕಾತಿ ಮಾಡಬೇಕು ಎಂದು ಆಗ್ರಹಿಸಿದರು.
ಪತಿಭಟನೆಯಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ನಾಗಜ್ಯೋತಿ, ಕಾವ್ಯ, ಪುಷ್ಪ ಸ್ವಪ್ನ, ಕವಿತ, ರಮ್ಯ, ಕಲ್ಲೇಶ್, ಶರತ್, ಬಸವರಾಜ್, ನಾಗ ವೇಣಿ ಸೇರಿದಂತೆ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.