ಪ್ಲಾಸ್ಟಿಕ್ ಬಳಕೆ ಅಂಗಡಿಗಳ ಮೇಲೆ ದಾಳಿ

200 ಕೆ.ಜಿ. ನಿಷೇಧಿತ ಪ್ಲಾಸ್ಟಿಕ್ ವಶ, 11,700 ರೂ.ದಂಡ

ದಾವಣಗೆರೆ, ಫೆ.5- ಕಾನೂನು ಬಾಹಿರ ಪ್ಲಾಸ್ಟಿಕ್ ಮಾರಾಟದ ಅಂಗಡಿಗಳ ಮೇಲೆ ನಗರ ಪಾಲಿಕೆಯ ಆರೋಗ್ಯ ಶಾಖೆ ಅಧಿಕಾರಿಗಳ ತಂಡ ಇಂದು ದಾಳಿ ನಡೆಸಿ, 200 ಕೆ.ಜಿ. ನಿಷೇಧಿತ ಪ್ಲಾಸ್ಟಿಕ್ ವಶಪಡಿಸಿಕೊಂಡಿದೆ.

ನಗರದ ಎಂ.ಜಿ. ರಸ್ತೆ, ಬಿ.ಟಿ. ಗಲ್ಲಿ, ವಿಜಯಲಕ್ಷ್ಮಿ ರಸ್ತೆ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಅನಧಿಕೃತ ಪ್ಲಾಸ್ಟಿಕ್ ಮಾರಾಟದ ಅಂಗಡಿಗಳ ಮೇಲೆ ನಡೆಸಿದ ದಾಳಿ ವೇಳೆ ಕಾನೂನು ಬಾಹಿರವಾಗಿ ಪ್ಲಾಸ್ಟಿಕ್ ಮಾರಾಟ ಮಾಡುತ್ತಿದ್ದ ಅಂಗಡಿಗಳಿಗೆ 11,700 ರೂ. ದಂಡ ವಿಧಿಸಲಾಗಿದೆ.

ನಗರದ ಅಂಗಡಿಗಳಲ್ಲಿ ಪ್ಲಾಸ್ಟಿಕ್ ಬಳಕೆ ಹಾಗೂ ಮಾರಾಟ ನಿಷೇಧ ಹೇರಲಾಗಿದೆ. ಆದರೂ ಕೆಲವರು ಕದ್ದು ಮುಚ್ಚಿ ಇನ್ನೂ ಮಾರಾಟ ಮಾಡುತ್ತಿರುವ ಹಿನ್ನೆಲೆಯಲ್ಲಿ ಕಾನೂನು ಮೀರುವವರಿಗೆ ಬಿಸಿ ಮುಟ್ಟಿಸಲಾಗಿದೆ.

ದಾಳಿ ವೇಳೆ ಆರೋಗ್ಯ ನಿರೀಕ್ಷಕರಾದ ಪ್ರಕಾಶ್, ನಿಖಿಲ್, ಮಧುಶ್ರೀ ಹಾಗೂ ಸಿಬ್ಬಂದಿ ಇದ್ದರು.

error: Content is protected !!