ದಾವಣಗೆರೆ, ಜು.2- ನಗರದಲ್ಲಿ ಕೊರೊನಾದಿಂದ ಮೃತಪಟ್ಟವರ ಮನೆಗೆ ತೆರಳಿ ಜಿಲ್ಲಾ ಕಾಂಗ್ರೆಸ್ ಸಾಂತ್ವನ ಹೇಳಿ, ನಿಮ್ಮ ಕುಟುಂಬದೊಂದಿಗೆ ನಾವಿದ್ದೇವೆ ಎಂಬ ಧೈರ್ಯ ತುಂಬಿತು.
ಶಾಸಕ ಡಾ|| ಶಾಮನೂರು ಶೀವಶಂಕರಪ್ಪ, ಮಾಜಿ ಸಚಿವ ಶಾಮನೂರು ಮಲ್ಲಿಕಾರ್ಜುನ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಬಿ.ಮಂಜಪ್ಪ ಅವರ ಮಾರ್ಗದರ್ಶನದಂತೆ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಮತಿ ಅನಿತಾಬಾಯಿ ಮಾಲತೇಶ್, ಬ್ಲಾಕ್ ಅಧ್ಯಕ್ಷ ಅಯೂಬ್ ಪೈಲ್ವಾನ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕೊರೊನಾದಿಂದ ಮೃತಪಟ್ಟ ವ್ಯಕ್ತಿಗಳ ಮನೆಗೆ ತೆರಳಿ ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ವಿಪಕ್ಷ ನಾಯಕ ಎ.ನಾಗರಾಜ್, ಸದಸ್ಯರಾದ ಶ್ರೀಮತಿ ಸುಧಾ ಇಟ್ಟಿಗುಡಿ ಮಂಜುನಾಥ್, ಮುಖಂಡರುಗಳಾದ ಮಂಜಮ್ಮ, ಪರಮೇಶ್, ಕೊಡಪಾನ ದಾದಾಪೀರ್, ಆನಂದ್ ಇಟ್ಟಿಗುಡಿ, ಸೂರ್ಯಪ್ರಕಾಶ್, ಮೈನುದ್ದೀನ್, ಮೊಟ್ಟೆ ದಾದಾಪೀರ್ ಮತ್ತಿತರರಿದ್ದರು.