ಕೋವಿಡ್ – 19 ಎರಡನೇ ಅಲೆಯು ರಾಷ್ಟ್ರಾದ್ಯಂತ ಹೆಚ್ಚಿನ ಪ್ರಮಾಣದಲ್ಲಿ ಹರಡಿ ಸಾರ್ವಜನಿಕರ ಜೀವದ ಜೊತೆ ಆಟವಾಡುತ್ತಿದ್ದು, ಸರ್ಕಾರದ ಆದೇಶ, ಜಿಲ್ಲಾಧಿಕಾರಿಗಳ ಹಾಗೂ ಜಿಲ್ಲಾ ವರಿಷ್ಠಾಧಿಕಾರಿಗಳ ಸೂಚನೆ ಹಾಗೂ ದೇವಸ್ಥಾನದ ಟ್ರಸ್ಟ್ನ ಅಧ್ಯಕ್ಷರು ಹಾಗೂ ಶಾಸಕರೂ ಆದ ಡಾ. ಶಾಮನೂರು ಶಿವಶಂಕರಪ್ಪ, ಟ್ರಸ್ಟ್ನ ಪದಾಧಿಕಾರಿಗಳ ಸೂಚನೆ ಮೇರೆಗೆ ಇಂದು ದಿನಾಂಕ 5ರ ಸೋಮವಾರ ಬೆಳಿಗ್ಗೆಯಿಂದಲೇ ಸದ್ಭಕ್ತರ ಹಾಗೂ ಸಾರ್ವಜನಿಕರ ದರ್ಶನಕ್ಕೆ ತೆರೆಯಲಾಗಿದೆ.
ಸದ್ಭಕ್ತರು ಮಾಸ್ಕ್, ಸಾಮಾಜಿಕ ಅಂತರ ಕಾಪಾಡಿಕೊಂಡು ತಾಯಿಯ ದರ್ಶನ ಪಡೆಕೊಳ್ಳಬೇಕು ಹಾಗೂ ದೇವಸ್ಥಾನದಲ್ಲಿ ತೀರ್ಥ, ಪ್ರಸಾದ ಇರುವುದಿಲ್ಲ ಎಂದು ದೇವಸ್ಥಾನ ಧರ್ಮದರ್ಶಿ ಗೌಡ್ರ ಚನ್ನಬಸಪ್ಪ ಅವರು ಭಕ್ತರಲ್ಲಿ ವಿನಂತಿಸಿಕೊಂಡಿದ್ದಾರೆ.