ಆಲೂರು ಹಟ್ಟಿಯಲ್ಲಿ ಲಸಿಕಾ ಜಾಗೃತಿ

ದಾವಣಗೆರೆ, ಜು.8- ಮಾಯಕೊಂಡ ಕ್ಷೇತ್ರ ಆಲೂರು ಹಟ್ಟಿಯಲ್ಲಿ ಕೊರೊನಾ ಲಸಿಕೆ ಹಾಕಿಸಿಕೊಳ್ಳುವ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಯಿತು. ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶಿಷ್ಟ  ಜಾತಿ ಘಟಕದ ಅಧ್ಯಕ್ಷ ಬಿ.ಹೆಚ್. ವೀರಭದ್ರಪ್ಪ ಕಾರ್ಯಕ್ರಮ ಉದ್ಘಾಟಿಸಿದರು.  

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪರಿಶಿಷ್ಟ ಜಾತಿ ರಾಜ್ಯ ಉಪಾಧ್ಯಕ್ಷ ನಾಗರಾಜ್ ನಾಯ್ಕ್ ವಹಿಸಿದ್ದರು. ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಉಪಾಧ್ಯಕ್ಷ  ಡಾ. ತುಳಸಿನಾಯ್ಕ್ ಜನರಿಗೆ ಮಾಹಿತಿ ನೀಡಿದರು.

ಜಿಲ್ಲಾ ಪಂಚಾಯತ್ ಸದಸ್ಯ ಬಸವಂತಪ್ಪ, ಮಾಯಕೊಂಡ ಬ್ಲಾಕ್‌ ಕಾಂಗ್ರೆಸ್ ಅಧ್ಯಕ್ಷ, ಬಿ.ಟಿ. ಹನುಮಂತಪ್ಪ, ಕಾಂಗ್ರೆಸ್ ಮುಖಂಡರಾದ ರಾಜನಾಯ್ಕ್, ಅಣಜಿ ರಾಜಣ್ಣ, ಎಪಿಎಂಸಿ ಅಧ್ಯಕ್ಷ ಚಂದ್ರಪ್ಪ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ರಂಗನಾಯ್ಕ, ಗ್ರಾ.ಪಂ. ಮಾಜಿ ಸದಸ್ಯ ಪುಟ್ಟಾನಾಯ್ಕ, ಗ್ರಾ.ಪಂ. ಮಾಜಿ ಸದಸ್ಯ ಮಹಾಂತೇಶ್ ನಾಯ್ಕ, ಮೂರ್ತ್ಯಪ್ಪ, ಅಂಜಿನಪ್ಪ ಹಾಗು ಇನ್ನಿತರೆ ಮುಖಂಡರು ಉಪಸ್ಥಿತರಿದ್ದರು.

error: Content is protected !!