ಅಗಸನಹಳ್ಳಿಗೆ ಕುಡಿಯುವ ನೀರಿನ ಘಟಕ ಮಂಜೂರು

ಸಂಸದ‌ ಸಿದ್ದೇಶ್ವರ ಭರವಸೆ

ಜಗಳೂರು, ಫೆ.20- ಗ್ರಾಮದಲ್ಲಿ ಶುದ್ದ ಕುಡಿಯುವ ನೀರಿನ ಘಟಕ ನಿರ್ಮಾಣಕ್ಕೆ ಮತ್ತು ಮೂಲ ಸೌಕರ್ಯ ಅಭಿವೃದ್ಧಿಗೆ ಅನುದಾನ ಮಂಜೂರು ಮಾಡಲಾಗುವುದು ಎಂದು ಸಂಸದ ಜಿ.ಎಂ‌.ಸಿದ್ದೇಶ್ವರ ಹೇಳಿದರು.

ತಾಲ್ಲೂಕಿನ ಅಗಸನಹಳ್ಳಿ ಗ್ರಾಮದಲ್ಲಿ `ಜಿಲ್ಲಾಧಿಕಾರಿಗಳ ನಡೆ‌ ಹಳ್ಳಿಯ ಕಡೆ’ ವಾಸ್ತವ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಬಡವರಿಗೆ ‌ಸರ್ಕಾರಿ ಸೌಲಭ್ಯ ಗಳು ಖರ್ಚು ವೆಚ್ಚವಿಲ್ಲದೇ ಶೀಘ್ರ ತಲುಪಲು ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಕಂ ದಾಯ ಸಚಿವರು ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ವಿನೂತನ‌ ಕಾರ್ಯಕ್ರಮ ರೂಪಿಸಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಜಿಲ್ಲಾಡಳಿತವು ಜಿಲ್ಲೆಯಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ, ಉತ್ತಮವಾಗಿ ಕಾರ್ಯನಿ ರ್ವಹಿಸುತ್ತಿದೆ. ಸಾರ್ವಜನಿಕರು ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು. ತಾಲ್ಲೂಕಿಗೆ ನೀರಾವರಿ ಸೌಲಭ್ಯ ಸೇರಿದಂತೆ ಬರದ ನಾಡಿನ ಸಮಗ್ರ ಅಭಿವೃದ್ಧಿಗಾಗಿ ಶಾಸಕ ಎಸ್.ವಿ.ರಾಮಚಂದ್ರ ಹಾಗೂ ನಾನು ಶ್ರಮಿಸುತ್ತೇವೆ ಎಂದು ಭರವಸೆ ನೀಡಿದರು.

ಕಾರ್ಯಕ್ರಮಕ್ಕೂ ಮುನ್ನ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಗ್ರಾಮದ ಮನೆಗಳಿಗೆ ತೆರಳಿ ಸಮಸ್ಯೆ ಆಲಿಸಿದರು.

ಕಾರ್ಯಕ್ರಮದ ನಂತರ ರಾತ್ರಿವಿಡೀ ಗ್ರಾಮದ ಯಾತ್ರಿ ನಿವಾಸದಲ್ಲಿ ಜಿಲ್ಲಾಡಳಿತ ವಾಸ್ತವ್ಯ ಹೂಡಲಿದ್ದಾರೆ.

ಈ ಸಂದರ್ಭದಲ್ಲಿ ಶಾಸಕ ಎಸ್.ವಿ.ರಾಮಚಂದ್ರ, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಜಿ.ಪಂ ಸಿಇಒ ವಿಜಯ್ ಮಹಾಂತೇಶ್, ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್, ತಹಶೀಲ್ದಾರ್ ಡಾ.ನಾಗವೇಣಿ, ಮುಖಂಡರಾದ ಅಸಗೋಡು ಜಯಸಿಂಹ, ಡಿಸಿಸಿ ಬ್ಯಾಂಕ್ ಜಿಲ್ಲಾಧ್ಯಕ್ಷ ವೇಣುಗೋಪಾಲರೆಡ್ಡಿ ಸೇರಿದಂತೆ ವಿವಿಧ ಇಲಾಖೆಗಳ‌ ಅಧಿಕಾರಿಗಳು ಭಾಗವಹಿಸಿದ್ದರು.

error: Content is protected !!