ದಾವಣಗೆರೆ, ಜು.19- ಎಸ್ಸೆಸ್ಸೆಲ್ಸಿ ಪರೀಕ್ಷೆ ಇಂದು ಪ್ರಾರಂಭಗೊಳ್ಳುವ ಸಂದರ್ಭದಲ್ಲಿ ಸ್ಥಳೀಯ ವಿನೋಬನಗರದ ಸೇಂಟ್ ಮೇರಿಸ್ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಪಾಲಿಕೆಯ ವಿಪಕ್ಷ ನಾಯಕ ಎ.ನಾಗರಾಜ್ ನೇತೃತ್ವದಲ್ಲಿ ವಿದ್ಯಾರ್ಥಿಗಳಿಗೆ ಮಾನಸಿಕ ಸ್ಥೈರ್ಯ ತುಂಬುವ ಮೂಲಕ ಶುಭಾಶಯ ಕೋರಿದರು. ಕೋವಿಡ್ಗೆ ಭಯಪಡದೇ ಸಾಮಾಜಿಕ ಅಂತರ ಕಾಪಾಡಿಕೊಂಡು, ಸ್ಯಾನಿಟೈಸರ್, ಮಾಸ್ಕ್ ಬಳಸಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಪಾಲಿಕೆಯ ಸದಸ್ಯರುಗಳಾದ ಗಡಿಗುಡಾಳ್ ಮಂಜುನಾಥ್, ಕೆ.ಚಮನ್ ಸಾಬ್, ಸೈಯದ್ ಚಾರ್ಲಿ, ಆಶಾ ಉಮೇಶ್ ಇನ್ನು ಮುಂತಾದವರು ಉಪಸ್ಥಿತರಿದ್ದರು.
January 23, 2025