ಜಗಳೂರು, ಜು.17- ಬೋಗಸ್ ಕಾರ್ಡ್ಗಳಿಗೆ ಕಡಿವಾಣ ಹಾಕಿ ಅರ್ಹ ಕಟ್ಟಡ ಕಾರ್ಮಿಕ ಫಲಾನುಭವಿಗಳಿಗೆ ವಿವಿಧ ಸೌಲಭ್ಯಗಳನ್ನು ಕಲ್ಪಿಸಲು ಒತ್ತಾಯಿಸಿ ಎಐಟಿಯುಸಿ ನೇತೃತ್ವದಲ್ಲಿ ಕಟ್ಟಡ ಕಾರ್ಮಿಕರು ನಿನ್ನೆ ಪ್ರತಿಭಟನೆ ನಡೆಸಿದರು.
ಪಟ್ಟಣದ ತಾಲ್ಲೂಕು ಕಛೇರಿ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ನಂತರ ತಹಶೀಲ್ದಾರ್ ಮೂಲಕ ಇಲಾಖೆ ಅಧಿಕಾರಿಗಳಿಗೆ ಲಿಖಿತ ಮನವಿ ಸಲ್ಲಿಸಿದರು.
ತಾಲ್ಲೂಕು ಅಧ್ಯಕ್ಷ ಮಹಮ್ಮದ್ ಬಾಷಾ, ಪ್ರಧಾನ ಕಾರ್ಯದರ್ಶಿ ಮಾದಿಹಳ್ಳಿ ಮಂಜುನಾಥ್ ಮಾತನಾಡಿದರು. ಈ ಸಂದರ್ಭದಲ್ಲಿ ಎಐಟಿಯುಸಿ ಪದಾಧಿಕಾರಿಗಳಾದ ವೀರಣ್ಣ, ತಿಪ್ಪೇಸ್ವಾಮಿ, ರಮೇಶ್, ಕರಿಬಸಪ್ಪ, ಭೀಮೇಶ್ ಪಾಳೆಗಾರ್, ವೆಂಕಟೇಶ್, ಮಂಜಪ್ಪ, ಮುಸ್ಟೂರಪ್ಪ, ದುರುಗೇಶ್, ಪರಶುರಾಮ್, ರಾಮಚಂದ್ರ, ಮಹೇಶ್ ಇನ್ನಿತರರು ಪಾಲ್ಗೊಂಡಿದ್ದರು.