ಜಿ.ಪಂ., ತಾ.ಪಂ. ಚುನಾವಣೆ ಮುಂದೂಡಿದೆ ಎಂದು ಮೈಮರೆಯಬೇಡಿ

ಮಲೇಬೆನ್ನೂರಿನ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಕಾರ್ಯಕರ್ತರಿಗೆ ಮಾಜಿ ಶಾಸಕ ಬಿ.ಪಿ. ಹರೀಶ್ ಕಿವಿಮಾತು

ಮಲೇಬೆನ್ನೂರು, ಜು.17- ಜಿ.ಪಂ. ಹಾಗೂ ತಾ.ಪಂ. ಚುನಾವಣೆ ಡಿಸೆಂಬರ್‌ಗೆ ಹೋಗಿದೆ ಎಂದು ಕಾರ್ಯಕರ್ತರು ಮೈಮರೆಯಬಾರದು. ಚುನಾವಣಾ ಆಯೋಗ ಯಾವಾಗ ಬೇಕಾದರೂ ಚುನಾವಣೆ ಘೋಷಣೆ ಮಾಡಬಹುದು. ಅದಕ್ಕಾಗಿ ಕಾರ್ಯಕರ್ತರು ಸನ್ನದ್ಧರಾಗಿರಬೇಕು ಎಂದು ಮಾಜಿ ಶಾಸಕ ಬಿ.ಪಿ. ಹರೀಶ್ ಹೇಳಿದರು.

ಶನಿವಾರ ಕೊಮಾರನಹಳ್ಳಿಯ ಶ್ರೀ ಲಕ್ಷ್ಮಿ ರಂಗನಾಥ ಸಮುದಾಯ ಭವನದಲ್ಲಿ ಹರಿಹರ ತಾಲ್ಲೂಕು ಗ್ರಾಮಾಂತರ ಬಿಜೆಪಿ ಘಟಕದ ವತಿಯಿಂದ ಹಮ್ಮಿಕೊಂಡಿದ್ದ ಗ್ರಾಮಾಂತರ ಬಿಜೆಪಿ ಮಂಡಲದ ಕಾರ್ಯಕಾರಿಣಿ ಸಭೆಯನ್ನು ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಜಿ.ಪಂ., ತಾ.ಪಂ. ನಂತರ ವಿಧಾನಸಭೆ ಚುನಾವಣೆ ಬರಲಿದ್ದು, ಬಿಜೆಪಿ ಮುಖಂಡರು, ಕಾರ್ಯಕರ್ತರು ಸ್ಥಳೀಯವಾಗಿ ಪಕ್ಷವನ್ನು ಸದೃಢಗೊಳಿಸಬೇಕು ಎಂದು ಕರೆ ನೀಡಿದ ಅವರು, ಹರಿಹರ ತಾಲ್ಲೂಕಿನಲ್ಲಿ ಬಿಜೆಪಿಗೆ ಉತ್ತಮ ವಾತಾವರಣ ಇದ್ದು, 5 ಜಿ.ಪಂ. ಮತ್ತು 8 ತಾ.ಪಂ. ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.  

ಜಿಲ್ಲಾ ಬಿಜೆಪಿ ಅಧ್ಯಕ್ಷ ಹನಗವಾಡಿ ವೀರೇಶ್ ಮಾತನಾಡಿ, ಬಿಜೆಪಿಯಲ್ಲಿ ಅಧಿಕಾರದ ವಿಕೇಂದ್ರೀಕರಣ ವ್ಯವಸ್ಥೆ ಇದ್ದು, ಇಲ್ಲಿ ಎಲ್ಲಾ ಹಂತದ ಅಧ್ಯಕ್ಷರಿಗೆ, ಪದಾಧಿಕಾರಿಗಳಿಗೆ ಮತ್ತು ಕಾರ್ಯಕರ್ತರಿಗೆ ವಿಶೇಷ ಗೌರವ ಹಾಗೂ ಜವಾಬ್ದಾರಿ ಇದೆ ಎಂದು ಹೇಳಲು ಸಂತೋಷವಾಗುತ್ತದೆ ಎಂದು ಹೇಳಿದರು.

ಹರಿಹರ ತಾಲ್ಲೂಕು ಗ್ರಾಮಾಂತರ ಬಿಜೆಪಿ ಅಧ್ಯಕ್ಷ ಹಿಂಡಸಘಟ್ಟಿ ಲಿಂಗರಾಜ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಬಾತಿ ಚಂದ್ರಶೇಖರ್, ಮಹಿಳಾ ಬಿಜೆಪಿ ಉಪಾಧ್ಯಕ್ಷೆ ಬೆಳ್ಳೂಡಿ ಗೀತಮ್ಮ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಐರಣಿ ಮಹೇಶ್ವರಪ್ಪ, ಬಿಜೆಪಿ ಮುಖಂಡ ಚಂದ್ರಶೇಖರ್, ತಾಲ್ಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಆದಾಪುರ ವೀರೇಶ್, ಹುಗ್ಗಿ ಮಹಾಂತೇಶ್, ದಿಶಾ ಕಮಿಟಿ ಸದಸ್ಯ ಐರಣಿ ಅಣ್ಣಪ್ಪ, ತಾ.ಪಂ. ಮಾಜಿ ಅಧ್ಯಕ್ಷೆ ಶ್ರೀದೇವಿ ಮಂಜಪ್ಪ, ತಾ.ಪಂ. ಮಾಜಿ ಸದಸ್ಯ ಗುಳದಹಳ್ಳಿ ಮಾಲತೇಶ್, ಹಾಲಿವಾಣ ಗ್ರಾ.ಪಂ. ಅಧ್ಯಕ್ಷ ಐ.ಪಿ. ರಂಗನಾಥ್ ಪಾಲ್ಗೊಂಡಿದ್ದರು.

 ಭದ್ರಾ ಕಾಡಾ ಸದಸ್ಯ ಗೋವಿನಹಾಳ್ ರಾಜಣ್ಣ, ತಾಲ್ಲೂಕು ಬಿಜೆಪಿ ಮಾಜಿ ಅಧ್ಯಕ್ಷ ಕೆ.ಹೆಚ್. ನಾಗನಗೌಡ, ಸಾಲಕಟ್ಟಿ ಸಿದ್ದಪ್ಪ, ಬಿ.ಪಿ. ಅಜಗನ್, ಕೆ. ಬೇವಿನಹಳ್ಳಿ ಹಾಲೇಶ್‌, ಪುರಸಭೆ ನಾಮಿನಿ ಸದಸ್ಯ ಪಿ.ಆರ್. ರಾಜು, ಗೌಡ್ರ ಮಂಜಣ್ಣ, ಆರೋಗ್ಯ ರಕ್ಷಾ ಸಮಿತಿ ಸದಸ್ಯ ಬಿ. ಮಂಜುನಾಥ್, ಭಾನುವಳ್ಳಿಯ ಆರ್.ಸಿ. ಪಾಟೀಲ್, ಬೆಣ್ಣೆಹಳ್ಳಿ ಬಸವರಾಜ್, ಹರಗನಹಳ್ಳಿ ಮಂಜಣ್ಣ, ಅಶೋಕ್, ಜಿಗಳಿಯ ಬಿಳಸನೂರು ಚಂದ್ರಪ್ಪ, ಹನುಮಗೌಡ, ಕುಂಬಳೂರು ಅಶೋಕ್, ವಿನಾಯಕ ಆರಾಧ್ಯಮಠ, ದೀಟೂರು ನಿರಂಜನ್ ಇನ್ನಿತರರು ಭಾಗವಹಿಸಿದ್ದರು.

error: Content is protected !!