ಎಸ್‌ವಿಆರ್‌ಗೆ ಸಚಿವ ಸ್ಥಾನಕ್ಕೆ ವಾಲ್ಮೀಕಿ ಸಮುದಾಯದ ಮುಖಂಡರ ಒತ್ತಾಯ

ಎಸ್‌ವಿಆರ್‌ಗೆ ಸಚಿವ ಸ್ಥಾನಕ್ಕೆ ವಾಲ್ಮೀಕಿ ಸಮುದಾಯದ ಮುಖಂಡರ ಒತ್ತಾಯ - Janathavaniದಾವಣಗೆರೆ, ಜು.28- ಜಗಳೂರು ಬಿಜೆಪಿ ಶಾಸಕ ಎಸ್.ವಿ. ರಾಮಚಂದ್ರಪ್ಪ ಅವರಿಗೆ ವಾಲ್ಮೀಕಿ ಸಮುದಾಯದ ಕೋಟಾದಡಿ ಸಚಿವ ಸ್ಥಾನ ನೀಡಲೇಬೇಕು ಎಂದು ವಾಲ್ಮೀಕಿ ನಾಯಕ ಸಮುದಾಯದ ಮುಖಂಡರು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರನ್ನು ಒತ್ತಾಯಿಸಿದ್ದಾರೆ.

ಜಗಳೂರು ಶಾಸಕ ರಾಮಚಂದ್ರಪ್ಪ ಅವರು ಮೂರು ಬಾರಿ ಗೆದ್ದಿದ್ದಾರೆ. ಅಲ್ಲದೇ, ಪರಿಶಿಷ್ಟ ಪಂಗಡ (ಎಸ್‌ಟಿ) ಸಮುದಾಯಕ್ಕೆ ಜಿಲ್ಲೆಯಲ್ಲಿ ಇದುವರೆಗೂ ಸಚಿವ ಸ್ಥಾನ ನೀಡಿಲ್ಲ. ಬಿಜೆಪಿ, ಕಾಂಗ್ರೆಸ್‌ನಲ್ಲಿ ಮುಂದುವರಿದ ಜನಾಂಗಕ್ಕೆ ಸಚಿವ ಸ್ಥಾನ ನೀಡಲಾಗಿದೆ. ಆದರೆ, ವಾಲ್ಮೀಕಿ ನಾಯಕ ಸಮುದಾಯಕ್ಕೆ ಅನ್ಯಾಯ ಆಗಿದೆ ಎಂದು ವಾಲ್ಮೀಕಿ ಸಮುದಾಯದ ಜಿಲ್ಲಾಧ್ಯಕ್ಷ ಬಿ. ವೀರಣ್ಣ ಆರೋಪಿಸಿದರು.

ರಾಜ್ಯದಲ್ಲಿ ವಾಲ್ಮೀಕಿ ಸಮುದಾಯದವರು 80 ಲಕ್ಷ ಮಂದಿ ಇದ್ದಾರೆ. ಜಿಲ್ಲೆಯಲ್ಲಿ ಎರಡೂವರೆ ಲಕ್ಷ ಜನಸಂಖ್ಯೆ ಇದೆ. ಯಡಿಯೂರಪ್ಪ ಅವರ ಸಚಿವ ಸಂಪುಟದಲ್ಲಿ ನಮ್ಮ ಸಮುದಾಯಕ್ಕೆ ಸ್ಥಾನ ನೀಡಲಿಲ್ಲ. ಈ ಬಾರಿ ವಾಲ್ಮೀಕಿ ಸಮುದಾಯಕ್ಕೆ ಅನ್ಯಾಯವಾಗ ಬಾರದು ಎಂದು ನಗರದ ವಾಲ್ಮೀಕಿ ನಾಯಕ ಸಮಾಜದ ಕಚೇರಿಯಲ್ಲಿ ಹೇಳಿದರು.

ಹಿಂದೆ ಶ್ರೀರಾಮುಲು ಅವರನ್ನು ಉಪ ಮುಖ್ಯಮಂತ್ರಿಯನ್ನಾಗಿ ಮಾಡುವುದಾಗಿ ಹೇಳಿದ್ದ ಬಿಜೆಪಿಯವರು ನುಡಿದಂತೆ ನಡೆಯಲಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು.

error: Content is protected !!