ಹರಪನಹಳ್ಳಿ, ಜು.28- ಶಾಸಕ ಎಸ್.ವಿ. ರಾಮಚಂದ್ರಪ್ಪ ಅವರಿಗೆ ಸಚಿವ ಸ್ಥಾನ ನೀಡುವಂತೆ ತಾಲ್ಲೂಕು ವಾಲ್ಮೀಕಿ ನಾಯಕ ಸಮಾಜದ ಅಧ್ಯಕ್ಷ ಕೆ. ಉಚ್ಚೆಂಗೆಪ್ಪ ಒತ್ತಾಯಿಸಿದ್ದಾರೆ. ಬಿಜೆಪಿ ಪಕ್ಷ ಕಟ್ಟುವಲ್ಲಿ ಶಾಸಕ ಎಸ್.ವಿ. ರಾಮಚಂದ್ರಪ್ಪ ಅವಿರತವಾಗಿ ಶ್ರಮಿಸುತ್ತಿದ್ದು, ಜಗಳೂರು ವಿಧಾನ ಸಭಾ ಕ್ಷೇತ್ರದಿಂದ 3 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಹಟ್ಟಿ ಚಿನ್ನದ ಗಣಿ ಹಾಗೂ ಪ್ರಸ್ತುತ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಹಿಂದುಳಿದ ಜಗಳೂರು ಹಾಗೂ ಹರಪನಹಳ್ಳಿ ತಾಲ್ಲೂಕಿನ 7 ಗ್ರಾಮ ಪಂಚಾಯ್ತಿಗಳಲ್ಲಿ ಉತ್ತಮ ಕೆಲಸ ಮಾಡಿದ್ದಾರೆಂದು ಅವರು ಶ್ಲಾಘಿಸಿದ್ದಾರೆ.
January 23, 2025