ದಾವಣಗೆರೆ, ಮೇ 11- ಮದ್ಯಪ್ರಿಯರ ಕಾಟ ತಡೆಯದೇ ಬೇಸತ್ತ ಗ್ರಾಮಸ್ಥರು ಬಾರ್ ಬಂದ್ ಮಾಡಿಸಿದ ಘಟನೆ ತಾಲ್ಲೂಕಿನ ಜರೇಕಟ್ಟೆ ಗ್ರಾಮದಲ್ಲಿ ನಡೆದಿದೆ.
ನಗರದಲ್ಲಿ ಕೋವಿಡ್-19 ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಬಾರ್‌ಗಳನ್ನು ಪ್ರಾರಂಭಿಸಲು ಅನುಮತಿ ನೀಡಿಲ್ಲ. ಆದ್ದರಿಂದ ನಗರದ ಮದ್ಯ ಪ್ರಿಯರು ಗ್ರಾಮೀಣ ಭಾಗಗಳಿಗೆ ನುಗ್ಗುತ್ತಿದ್ದಾರೆ. ಇದರಿಂದಾಗಿ ಗ್ರಾಮಗಳಲ್ಲಿ ಜನಸಂದಣಿಯಾಗುತ್ತಿದೆ. ಇದರಿಂದ ಬೇಸತ್ತಿರುವ ಗ್ರಾಮಸ್ಥರು ಬಾರ್ ಮುಚ್ಚುವಂತೆ ಒತ್ತಡ ಹಾಕುತ್ತಿದ್ದಾರೆ.
ನಗರ ವ್ಯಾಪ್ತಿಯಿಂದ 5 ಕಿ.ಮೀ. ಸಮೀಪದ ಜರೇಕಟ್ಟೆ ಗ್ರಾಮಕ್ಕೆ ದಾವಣಗೆರೆ ಭಾಗದ ಮದ್ಯಪ್ರಿಯರು ಲಗ್ಗೆ ಇಡುತ್ತಿದ್ದಾರೆ.
ಆದರೆ ಸಾಮಾಜಿಕ ಅಂತರ ಪಾಲನೆ ಆಗುತ್ತಿಲ್ಲ. ಇದರಿಂದ ರೋಸಿ ಹೋದ ಜನರು ಬಾರ್ ಬಂದ್ ಮಾಡಿ ಪ್ರತಿಭಟನೆ ಮಾಡಿದ್ದಾರೆ.
ಅಲ್ಲದೇ ಜರೇಕಟ್ಟೆಯನ್ನು ಬಫರ್ ಝೋನ್ ಎಂದು ಘೋಷಿಸಲು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ.
January 25, 2025