ಪಿಎಂ-ಸಿಎಂ ಪರಿಹಾರ ಘೋಷಣೆ ಸ್ವಾಗತಾರ್ಹ

ಹರಪನಹಳ್ಳಿ ಶಾಸಕ ಜಿ. ಕರುಣಾಕರ ರೆಡ್ಡಿ
ಹರಪನಹಳ್ಳಿ, ಮೇ 16- ಕೊರೊನಾ ಮಹಾ ಮಾರಿಯಿಂದ ಇಡೀ ವಿಶ್ವವೇ ತತ್ತರಿಸಿದ್ದು, ಲಕ್ಷಾಂತರ ಜನರು ಸಾಯುತ್ತಿದ್ದಾರೆ. ಇದರಿಂದ ಪಾರಾಗಲು ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬಡವರು, ರೈತರು, ಮಧ್ಯಮ ವರ್ಗ, ಕೈಗಾರಿಕೆಗಳಿಗೆ ಪುನಶ್ಚೇತನ ನೀಡುವ ಮೂಲಕ ಕಷ್ಟದಲ್ಲಿರುವವರಿಗೆ ಸಹಕಾರ ಮಾಡಿದ್ದಾರೆ ಎಂದು ಶಾಸಕ ಜಿ. ಕರುಣಾಕರ ರೆಡ್ಡಿ ಹೇಳಿದರು.
ಪಟ್ಟಣದ ಕೃಷಿ ಇಲಾಖೆಯಲ್ಲಿ ರೈತರಿಗೆ ಬಿತ್ತನೆ ಬೀಜ ವಿತರಣೆ, ಬಸ್ ಡಿಪೋದಲ್ಲಿ ಕೆಲಸ ಮಾಡುವವರಿಗೆ ಸ್ಯಾನಿಟೈಸರ್ ವಿತರಣೆ ಹಾಗೂ ತಾಲ್ಲೂಕು ಪಂಚಾಯ್ತಿಯಲ್ಲಿ ಅಧಿಕಾರಿಗಳ ಸಭೆ ನಡೆಸಿ, ನಂತರ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ದೇಶದಲ್ಲಿ ಆರ್ಥಿಕ ಅಭಿವೃದ್ಧಿಗೆ ಒತ್ತು ನೀಡಿದ್ದು, 200 ಕೋಟಿ ರೂಪಾಯಿವರೆಗಿನ ಟೆಂಡರ್‌ನಲ್ಲಿ ವಿದೇಶಿ ಕಂಪನಿಗಳು ಭಾಗವಹಿಸು ವಂತಿಲ್ಲ ಎಂಬ ನಿರ್ಧಾರ ಉತ್ತಮ ಬೆಳವಣಿಗೆಯಾ ಗಿದೆ. ಬಡವರು, ಕೂಲಿ ಕಾರ್ಮಿಕರು ಸೇರಿದಂತೆ, ಎಲ್ಲಾ ವರ್ಗಗಳ ಪರವಾಗಿ ಸರ್ಕಾರ ನಿಂತಿದೆ ಎಂದರು.
ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಒಪಿಡಿ, ಇಸಿಜಿ ಹಾಗೂ ಡಯಾಲಿಸಿಸ್ ಆರಂಭಿಸಲಾಗಿದ್ದು, ಹಂತ ಹಂತವಾಗಿ ಕೊರೊನಾ ಬಂದ ಮೇಲೆ ಸಾರ್ವಜನಿಕ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸುವ ಪ್ರಯತ್ನ ಮಾಡುತ್ತಿದ್ದೇವೆ.
ಉತ್ತರ ಪ್ರದೇಶದ ವಲಸೆ ಕಾರ್ಮಿಕರಿಗೆ ತಮ್ಮ ಸ್ವಗ್ರಾಮಗಳಿಗೆ ಹೋಗಲು ರೈಲು ವ್ಯವಸ್ಥೆ ಕೂಡ ಮಾಡಲಾಗಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಡಿವೈಎಸ್‌ಪಿ ಮಲ್ಲೇಶ್ ದೊಡ್ಡಮನಿ, ಸಿಪಿಐ ಕೆ. ಕುಮಾರ್, ತಾಲ್ಲೂಕು ಪಂಚಾಯ್ತಿ ಉಪಾಧ್ಯಕ್ಷ ಮಂಜಾನಾಯ್ಕ, ಬಿಜೆಪಿ ತಾಲ್ಲೂಕು ಅಧ್ಯಕ್ಷ ಸತ್ತೂರು ಹಾಲೇಶ್, ಉಪಾಧ್ಯಕ್ಷ ನಿಟ್ಟೂರು ಸಣ್ಣಹಾಲಪ್ಪ, ಬಿಜೆಪಿ ಎಸ್.ಟಿ. ಘಟಕದ ತಾಲ್ಲೂಕು ಅಧ್ಯಕ್ಷ ಆರ್. ಲೋಕೇಶ್, ಬಾಗಳಿ ಕೊಟ್ರೇಶಪ್ಪ, ಪುರಸಭೆ ಸದಸ್ಯರುಗಳಾದ ಕಿರಣ್‌ಕುಮಾರ್ ಶಾನಭೋಗ, ದ್ಯಾಮಜ್ಜಿ ರೊಕ್ಕಪ್ಪ, ಜಾವಿದ್ ಮುಖಂಡರಾದ ಎಂ.ಪಿ. ನಾಯ್ಕ್, ಯಡಿಹಳ್ಳಿ ಶೇಖರಪ್ಪ, ಎಂ. ಮಲ್ಲೇಶ್, ಕರೇಗೌಡ, ರಾಘವೇಂದ್ರ ಶೆಟ್ಟಿ, ಯು.ಪಿ. ನಾಗರಾಜ್, ಸಹಾಯಕ ಕೃಷಿ ನಿರ್ದೇಶಕ ಮಂಜುನಾಥ ಗೊಂದಿ ಇನ್ನಿತರರಿದ್ದರು.

error: Content is protected !!