ದಾವಣಗೆರೆ, ಮೇ 29- ವಿದ್ಯಾರ್ಥಿಗಳ ಹಲವು ಬೇಡಿಕೆಗಳೊಂ ದಿಗೆ ಮೇ 26ರಂದು ಅಖಿಲ ಕರ್ನಾ ಟಕ ಆಗ್ರಹ ದಿನಕ್ಕೆ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈ ಸೇಷನ್ (ಎಐಡಿಎಸ್ ಓ) ರಾಜ್ಯ ಸಮಿತಿ ಕರೆ ನೀಡಿದ ಹಿನ್ನೆಲೆಯಲ್ಲಿ ನಗರದಲ್ಲಿ ನಿನ್ನೆ ಸಂಘಟನೆಯ ಜಿಲ್ಲಾ ಸಮಿತಿ ಬೇಡಿಕೆಗಳ ಮನವಿಯನ್ನು ಉಪವಿಭಾಗಾಧಿಕಾರಿ ಕಛೇರಿಗೆ ತೆರಳಿ ಸಲ್ಲಿಸಿತು.
ಸಂಘಟನೆಯು ವಿದ್ಯಾರ್ಥಿಗಳ ಬೇಡಿಕೆಗಳ ಈಡೇರಿಕೆಗೆ ಆನ್ ಲೈನ್ ಹೋರಾಟ ಆರಂಭಿಸಿದ್ದು, ಇದರ ಭಾಗವಾಗಿ ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರರ ಮೂಲಕ ಶಿಕ್ಷಣ ಸಚಿವರಿಗೆ ಹಾಗೂ ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳ ಕುಲಪತಿಗಳಿಗೆ ತಲುಪಿಸಲಾಗಿದೆ ಎಂದು ಸಂಘಟನೆ ಪದಾಧಿಕಾರಿಗಳು ತಿಳಿಸಿದ್ದಾರೆ.
ಮೇ ತಿಂಗಳು ಕಳೆದು ಹೊಸ ಶೈಕ್ಷಣಿಕ ವರ್ಷ ಸಮೀಪಿಸುತ್ತಿದೆ. ತುತ್ತು ಅನ್ನಕ್ಕೇ ಪರದಾಡುವ ಪರಿಸ್ಥಿತಿಯಲ್ಲಿರುವ ಜನ ಸಾಮಾನ್ಯರು ತಮ್ಮ ಮಕ್ಕಳ ಶಿಕ್ಷಣದ ಭಾರವನ್ನು ಹೊರಲು ಖಂಡಿತಾ ಸಾಧ್ಯವಿಲ್ಲ. ಆದ ಕಾರಣ ತಕ್ಷಣವೇ ರಾಜ್ಯ ಸರ್ಕಾರ ಎಚ್ಚೆತ್ತು ಈ ಮಕ್ಕಳ ಶಿಕ್ಷಣದ ಜವಾಬ್ದಾರಿಯನ್ನು ಹೊರಬೇಕು. ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲಾ ಕಾಲೇಜುಗಳ ಶುಲ್ಕವನ್ನು ಸರ್ಕಾರವೇ ಭರಿಸಬೇಕು. ವಿಶ್ವವಿದ್ಯಾ ಲಯಗಳ ಪರೀಕ್ಷಾ ಶುಲ್ಕ ರದ್ದುಗೊಳಿ ಸಬೇಕು. ಈಗಾಗಲೇ ಶುಲ್ಕ ಪಡೆದಿ ದ್ದಲ್ಲಿ, ಅದನ್ನು ವಾಪಸ್ ಮಾಡಬೇಕು. ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ನೀಡಬೇಕು. ಎಲ್ಲಾ ವಿದ್ಯಾರ್ಥಿಗಳ ಶಿಷ್ಯ ವೇತನವನ್ನು (ಸ್ಕಾಲರ್ ಶಿಪ್) ಹೆಚ್ಚಿಸಿ, ಕಡ್ಡಾಯವಾಗಿ ನೀಡಬೇಕು ಎಂದು ಆಗ್ರಹಿಸಿದರು.
ಈ ವೇಳೆ ಎಐಡಿಎಸ್ಓ ಜಿಲ್ಲಾಧ್ಯಕ್ಷೆ ಸೌಮ್ಯ, ಜಿಲ್ಲಾ ಉಪಾಧ್ಯಕ್ಷೆ ನಾಗಜ್ಯೋತಿ, ಜಿಲ್ಲಾ ಕಾರ್ಯದರ್ಶಿ ಪೂಜಾ, ಸಂಘಟನಾಕಾರ ಅಭಿಷೇಕ್ ಇದ್ದರು.