ದಾವಣಗೆರೆ, ಮೇ 29- ಸರ್ಕಾರದ ವಿವಿಧ ಇಲಾಖೆಗಳ ಹಾಸ್ಟೆಲ್, ವಸತಿ ಶಾಲೆ ಮತ್ತು ಕಛೇರಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹೊರ ಗುತ್ತಿಗೆ ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ವಸತಿ ನಿಲಯ ಕಾರ್ಮಿಕರ ಸಂಘದ ಜಿಲ್ಲಾ ಸಮಿತಿ, ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ ನೇತೃತ್ವದಲ್ಲಿ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ಪಂಗಡ ಇಲಾಖೆಯ ಜಿಲ್ಲಾಧಿಕಾರಿಗಳಿಗೆ ನಗರದಲ್ಲಿ ಮನವಿ ಸಲ್ಲಿಸಲಾಯಿತು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಲಾಕ್‍ಡೌನ್ ಅವಧಿಯಲ್ಲಿ ಎಲ್ಲಾ ಗುತ್ತಿಗೆ ಕಾರ್ಮಿ ಕರಿಗೂ ವೇತನ ನೀಡಬೇಕೆಂದು ಸುತ್ತೋಲೆ ಹೊರ ಡಿಸಿದೆ. ಆದರೆ ಕೆಲವು ಜಿಲ್ಲೆಗಳಲ್ಲಿ ಅಧಿಕಾರಿಗಳು ಲಾಕ್‍ಡೌನ್ ಅವಧಿಯ ವೇತನ ನೀಡುತ್ತಿಲ್ಲ. ಕಾರಣ ಕೇಳಿದರೆ ಲಾಕ್ ಡೌನ್ ಅವಧಿಯಲ್ಲಿ ಕೆಲಸ ಮಾಡಿದರೆ ಮಾತ್ರ ನೀಡುವುದಾಗಿ ತಿಳಿಸುತ್ತಿದ್ದಾರೆ ಮತ್ತು ಕೆಲವು ಜಿಲ್ಲೆಗಳಲ್ಲಿ ಪ್ರಿ ಮೆಟ್ರಿಕ್ ಹೊರತು ಪಡಿಸಿ ಇತರರಿಗೆ ನೀಡಿದ್ದಾರೆ. ಮಾರ್ಚ್ ಮತ್ತು ಏಪ್ರಿಲ್ ತಿಂಗಳು ಪ್ರಿ ಮೆಟ್ರಿಕ್/ ವಸತಿ ಶಾಲೆಗಳು/ ಆಶ್ರಮ ಶಾಲೆಗಳು ರಜೆ ಇರುವುದರಿಂದ ವೇತನ ಬರುವುದಿಲ್ಲವೆಂದು ತಿಳಿಸುತ್ತಿದ್ದಾರೆ. ಆದರೆ ಲಾಕ್‍ಡೌನ್ ಅವಧಿಯಲ್ಲಿ ಬೇರೆ ಕೆಲಸಗಳನ್ನು ನಿರ್ವಹಿಸುವುದು ಸಾಧ್ಯವಿಲ್ಲ ಎಂದು ಸಂಘಟನೆಯ ಪದಾಧಿಕಾರಿಗಳು ತಿಳಿಸಿದರು.
ಈ ಸಂದರ್ಭದಲ್ಲಿ ಸಂಘಟನೆ ಜಿಲ್ಲಾ ಉಪಾ ಧ್ಯಕ್ಷ ತಿಪ್ಪೇಸ್ವಾಮಿ ಅಣಬೇರು, ಹೊರಗುತ್ತಿಗೆ ಕಾರ್ಮಿಕರಾದ ಮಂಗಳಮ್ಮ, ಸರೋಜಮ್ಮ, ಯತೀಶ್, ರಾಧಮ್ಮ ಸೇರಿದಂತೆ ಇತರರಿದ್ದರು.